ಮಂಗಳೂರು: ಬುರ್ಖಾ ಧರಿಸಿ ನೃತ್ಯ ಪ್ರದರ್ಶನ; ನಾಲ್ಕು ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಕಾಲೇಜು
Thursday, December 8, 2022
ಮಂಗಳೂರು: ಬುರ್ಖಾ ಧರಿಸಿ ವೇದಿಕೆಯಲ್ಲಿ ನೃತ್ಯ ಪ್ರದರ್ಶನ ಮಾಡಿರುವ ವೀಡಿಯೋ ವೈರಲ್ ಆಗಿ ಭಾರೀ ಆಕ್ಷೇಪ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ನಾಲ್ವರು ವಿದ್ಯಾರ್ಥಿಗಳನ್ನು ಅಮಾನತು ಮಾಡಿರುವ ಘಟನೆ ನಗರದ ವಾಮಂಜೂರಿನ ಖಾಸಗಿ ಕಾಲೇಜಿನಲ್ಲಿ ನಡೆದಿದೆ.
ವಾಮಂಜೂರಿನ ಸೈಂಟ್ ಜೋಸೆಫ್ ಖಾಸಗಿ ಕಾಲೇಜಿನಲ್ಲಿ ಬುಧವಾರ ಸಂಜೆ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದ ಬಳಿಕ ಬುರ್ಖಾ ಧಾರಿಣಿ ನಾಲ್ವರು ವಿದ್ಯಾರ್ಥಿಗಳು ವೇದಿಕೆಯಲ್ಲಿ ಬಾಲಿವುಡ್ ಸಾಂಗ್ ಗೆ ನೃತ್ಯ ಮಾಡಿದ್ದರು. ಇದರ ವೀಡಿಯೋ ಚಿತ್ರೀಕರಣ ಮಾಡಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದನ್ನು ಗಂಭೀರವಾಗಿ ತೆಗೆದುಕೊಂಡ ಕಾಲೇಜು ಆಡಳಿತ ಮಂಡಳಿ ಆಂತರಿಕ ವಿಚಾರಣೆಯ ನಡೆಸಿ ನಾಲ್ವರು ವಿದ್ಯಾರ್ಥಿಗಳನ್ನು ಅಮಾನತು ಮಾಡಿದೆ.
ಈ ವಿದ್ಯಾರ್ಥಿಗಳು ಕಾಲೇಜಿನ ಅಧಿಕೃತ ಕಾರ್ಯಕ್ರಮದ ಬಳಿಕ ನೃತ್ಯ ಮಾಡಿದ್ದಾರೆ. ಕಾಲೇಜು ತನ್ನ ಆವರಣದಲ್ಲಿ ಯಾವುದೇ ರೀತಿಯ ಆಕ್ಷೇಪಾರ್ಹ ಹಾಗೂ ಸಮುದಾಯಗಳ ನಡುವೆ ಸೌಹಾರ್ದತೆಗೆ ಧಕ್ಕೆ ತರುವ ಕಾರ್ಯವನ್ನು ಬೆಂಬಲಿಸುವುದಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.
Viral video