ಮಂಗಳೂರು: ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಚಿನ್ನಾಭರಣ ಕಳವುಗೈದು ಪರಾರಿಯಾಗಿದ್ದ ಆರೋಪಿ ಅರೆಸ್ಟ್
Saturday, December 17, 2022
ಮಂಗಳೂರು: ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಪ್ರಯಾಣಿಕರೊಬ್ಬರ ಬಳಿಯಿದ್ದ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದ ಕಳ್ಳನನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
ಕೇರಳ, ಕೋಝಿಕ್ಕೋಡ್ ನಿವಾಸಿ ಫಿರೋಜ್ ಪದವತ್ (38) ಬಂಧಿತ ಆರೋಪಿ.
ಮಂಗಳೂರಿನ ಫ್ಲ್ಯಾಟ್‌ಫಾರ್ಮ್‌ನಲ್ಲಿ ಮಲಗಿದ್ದ ಪ್ರಯಾಣಿಕರೊಬ್ಬರ ಚಿನ್ನದ ಬ್ರಾಸ್ಲೆಟ್ ಮತ್ತು ಸರವನ್ನು ಆರೋಪಿ ಫಿರೋಜ್ ದೋಚಿ ಪರಾರಿಯಾಗಿದ್ದ. ಈತ 48 ಗ್ರಾಂ ತೂಕದ 2.37 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕಳವುಗೈದಿದ್ದಾನೆಂದು ರೈಲ್ವೇ ಪೊಲೀಸರು ತಿಳಿಸಿದ್ದಾರೆ.
ಕಣ್ಣೂರು-ಮಂಗಳೂರು ಮೆಮೊ ರೈಲಿನಲ್ಲಿ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದ ಸಂದರ್ಭ ಆರೋಪಿಯನ್ನು ಬಂಧಿಸಲಾಗಿದೆ ಎಂದು ಮಂಗಳೂರು ರೈಲ್ವೆ ಪೊಲೀಸರು ತಿಳಿಸಿದ್ದಾರೆ. ಈತ ಕದ್ದಿರುವ ಚಿನ್ನದ ಸರ ಹಾಗೂ ಬ್ರಾಸ್ಲೆಟ್ ಅನ್ನು ಆರೋಪಿಯಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.