ಸುರತ್ಕಲ್: ಮಗುವೊಂದರ ಅಪಹರಣಕ್ಕೆ ವಿಫಲ ಯತ್ನ
Monday, December 5, 2022
ಸುರತ್ಕಲ್: ರಾತ್ರಿ ವೇಳೆ ಮನೆಯ ಮುಂಭಾಗ ನಿಂತಿದ್ದ ಮಗುವೊಂದರ ಅಪಹರಕ್ಕೆ ವಿಫಲ ಯತ್ನ ನಡೆಸಿರುವ ಘಟನೆಯೊಂದು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟು ಎಂಬಲ್ಲಿ ನಡೆದಿದೆ. ಈ ಘಟನೆಯ ವೀಡಿಯೋವೊಂದು ವೈರಲ್ ಆಗಿದೆ.
ನಗರದ ಸುರತ್ಕಲ್‌ನಲ್ಲಿ ಸೋಮವಾರ ರಾತ್ರಿ 9ಗಂಟೆಯ ಸುಮಾರಿಗೆ ವಿದ್ಯುತ್ ಕಡಿತಗೊಂಡಿತ್ತು. ಈ ಸಂಧರ್ಭದಲ್ಲಿ ಚೊಕ್ಕಬೆಟ್ಟು ಜುಮಾ ಮಸೀದಿಯ ಮುಂಭಾಗದಲ್ಲಿದ್ದ ಮನೆಯೊಂದರ ಮುಂದೆ ಮಗುವೊಂದು ನಿಂತಿತ್ತು. ಅಲ್ಲಿಗೆ ಬಂದ ನೀಲಿ ಬಣ್ಣದ ಟಿ ಶರ್ಟ್ ಧರಿಸಿದ್ದ ವ್ಯಕ್ತಿಯೋರ್ವ ಮಗುವಿನ ಕೈ ಹಿಡಿದು 'ನಿನ್ನ ಅಣ್ಣ ಕಾರಿನಲ್ಲಿದ್ದಾನೆ, ಬಾ' ಎಂದು ಕರೆದೊಯ್ಯಲು ಪ್ರಯತ್ನಿಸಿದ್ದಾನೆ. ಈ ವೇಳೆ ಆ ಮಗು ಅಣ್ಣ ಮನೆಯಲ್ಲಿದ್ದಾನೆಂದು ಹೆದರಿಕೊಂಡು ಆತನ ಕೈಯಿಂದ ತಪ್ಪಿಸಿಕೊಂಡು ಮನೆಗೆ ಓಡಿ ಬಂದಿದೆ. ಈ ವೇಳೆ ಅಪಹರಣಕಾರ ಸ್ಥಳದಿಂದ ಪರಾರಿಯಾಗಿದ್ದಾನೆ.
ಮಗುವಿನ ಅಪಹರಣಕ್ಕೆ ಯತ್ನಿಸಿದ ಶಂಕಿತ ವ್ಯಕ್ತಿಯ ಚಲನವಲನಗಳು ಮಸೀದಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಸುರತ್ಕಲ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದ ಸಮೀಪದ ಸಿಸಿ ಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದುಕೊಂಡಿದ್ದು, ತನಿಖೆ ಪ್ರಾರಂಭಿಸಿದ್ದಾರೆ. Cc camera video