ಕಾರ್ಕಳದಲ್ಲಿ ಭೀಕರ ರಸ್ತೆ ಅಪಘಾತ;ಪುಣ್ಯಕ್ಷೇತ್ರ ಕ್ಷೇತ್ರ ಸಂದರ್ಶನ ಹೊರಟಿದ್ದ ಒಂದೇ ಕುಟುಂಬದ ಮೂವರು ಬಲಿ
Friday, December 9, 2022
ಉಡುಪಿ; ಪುಣ್ಯಕ್ಷೇತ್ರಗಳಿಗೆ ಸಂದರ್ಶನ ಹೊರಟಿದ್ದ ಒಂದೇ ಕುಟುಂಬದ ಮೂವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ.
ಕಾರ್ಕಳ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಲ್ಲಿಕಾರು ಎಂಬಲ್ಲಿ ಇಂದು (ಶನಿವಾರ) ಬೆಳಗ್ಗೆ ಏಳು ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ಧರ್ಮಸ್ಥಳ, ಸುಬ್ರಹ್ಮಣ್ಯ ದೇವಾಲಯಕ್ಕೆ ತೆರಳಿ, ಅಲ್ಲಿಂದ ಕಾರ್ಕಳ ಮೂಲಕ ಶೃಂಗೇರಿಯತ್ತ ಹೊರಟಿದ್ದ ಕಾರಿಗೆ ಕೆಎಸ್ಸಾರ್ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಕಾರಿನಲ್ಲಿ ಆಂಧ್ರಪ್ರದೇಶದ ಕುಟುಂಬ ಪ್ರಯಾಣಿಸುತ್ತಿದ್ದರು.
ನಾಗರಾಜ್ (40), ಅವರ ಪತ್ನಿ ಪ್ರತ್ಯುಷಾ(32), ಮತ್ತವರ ಎರಡು ವರ್ಷದ ಮಗು ಮೃತಪಟ್ಟ ದುರ್ದೈವಿಗಳು.ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು ಉಳಿದ ಗಾಯಾಳುಗಳನ್ನು ಕಾರ್ಕಳದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.