ಯಾದಗಿರಿ:ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಸರ್ಕಾರಿ ಶಾಲೆಯ ಪ್ರಾಂಶುಪಾಲರ ಬಂಧನ
Saturday, December 24, 2022
ಯಾದಗಿರಿ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಸರ್ಕಾರಿ ವಸತಿ ಶಾಲೆಯ ಪ್ರಾಂಶುಪಾಲನನ್ನು ಯಾದಗಿರಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯ ಗಾಳೆಪ್ಪ ಪೂಜಾರಿ ಎಂದು ಗುರುತಿಸಲಾಗಿದೆ. ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಯಾದಗಿರಿಯ ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಿಇಒಗೆ ಯಾದಗಿರಿ ಜಿಲ್ಲಾಧಿಕಾರಿ ಸೂಚನೆ ನೀಡಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ.