ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಹಿಂದು ಸಂಘಟನೆ ಮುಖಂಡನ ಶವ ಪತ್ತೆ
Thursday, January 12, 2023
ಬಂಟ್ವಾಳ: ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಹಿಂದು ಸಂಘಟನೆ ಮುಖಂಡನ ಶವ ಪತ್ತೆಯಾಗಿದೆ.
ವಿಶ್ವ ಹಿಂದು ಪರಿಷತ್ ಮತ್ತು ಗೋರಕ್ಷಾ ಪ್ರಮುಖ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಸಜಿಪ ನಿವಾಸಿ ರಾಜೇಶ್ ಸುವರ್ಣ(32) ಶವ ಪತ್ತೆಯಾಗಿದ್ದು ಆತ್ಮಹತ್ಯೆಯೋ, ಕೊಲೆಯೋ ಎನ್ನುವ ಅನುಮಾನ ವ್ಯಕ್ತವಾಗಿದೆ.
ಪಾಣೆಮಂಗಳೂರು ನೇತ್ರಾವತಿ ನದಿ, ಹಳೆ ಸೇತುವೆ ಬಳಿ ನಿಲ್ಲಿಸಿದ್ದ ಬೈಕ್ ಪತ್ತೆಯಾಗಿತ್ತು. ಇದರಿಂದ ಅನುಮಾನಗೊಂಡ ಸ್ಥಳೀಯರು ನದಿಯಲ್ಲಿ ಹುಡುಕಾಟ ನಡೆಸಿದ್ದು ಈ ವೇಳೆ ಶವ ಪತ್ತೆಯಾಗಿದೆ. ರಾಜೇಶ್ ಸುವರ್ಣ ಬಂಟ್ವಾಳ ತಾಲೂಕಿನ ಸಜಿಪ ನಿವಾಸಿಯಾಗಿದ್ದು ಹಿಂದೂ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಸ್ಥಳಕ್ಕೆ ಬಂಟ್ವಾಳ ನಗರ ಠಾಣೆ ಪೊಲೀಸರು ಆಗಮಿಸಿದ್ದು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.