ಬಂಟ್ವಾಳ ಶಾಸಕರ ಪ್ರಚಾರ ವಾಹನ ಬೈಕಿಗೆ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

ಬಂಟ್ವಾಳ ಶಾಸಕರ ಪ್ರಚಾರ ವಾಹನ ಬೈಕಿಗೆ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

ಬಂಟ್ವಾಳ : ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ನೇತೃತ್ವದಲ್ಲಿ ಬಿಜೆಪಿ ಪ್ರಚಾರ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬೈಕ್ ಮತ್ತು ಬಿಜೆಪಿ ಶಾಸಕರ ಚುನಾವಣಾ ಪ್ರಚಾರದ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತ ಬೈಕ್‌ ಸವಾರನನ್ನು ಗುರುವಾಯನಕೆರೆ ಮೂಲದ ನಾರಾಯಣ ಎಂಬವರ ಪುತ್ರ ವಿಜಿತ್ (35) ಎಂದು ಗುರುತಿಸಲಾಗಿದೆ.
ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದು ಘಟನೆ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ಅಪಘಾತ ಹೇಗೆ ಸಂಭವಿಸಿದೆ ಎಂದು ತಿಳಿದುಬಂದಿಲ್ಲ. ಸ್ಥಳಕ್ಕೆ ಬಂಟ್ವಾಳ ನಗರ ಸಂಚಾರಿ ಠಾಣೆ ಪೊಲೀಸರು ಆಗಮಿಸಿದ್ದು ಪ್ರಕರಣ ದಾಖಲಿಸಿದ್ದಾರೆ.

ಬಂಟ್ವಾಳದಲ್ಲಿ ನಡೆಯುವ ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸುತ್ತಿದ್ದ ವಾಹನಕ್ಕೆ ನರಹರಿ ಪರ್ವತ ಬಳಿಯ ತಿರುವಿನಲ್ಲಿ ಬೈಕ್ ಸ್ಕಿಡ್ ಆಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ಸವಾರನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲೇ ಯುವಕ ಮೃತಪಟ್ಟಿದ್ದಾನೆ. ಅಪಘಾತ ಸಂದರ್ಭದಲ್ಲಿ ಶಾಸಕ ರಾಜೇಶ್ ನಾಯ್ಕ ಪ್ರಚಾರ ವಾಹನದಲ್ಲಿ ಇರಲಿಲ್ಲ. ಶಾಸಕರು ಬಳಿಕ ಆಸ್ಪತ್ರೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

Ads on article

Advertise in articles 1

advertising articles 2

Advertise under the article