ಮಂಗಳೂರು: ಹೃದಯಾಘಾತದಿಂದ ಭೋಪಾಲ್ ನಲ್ಲಿ ಮೃತಪಟ್ಟ ಮಂಗಳೂರು ಮೂಲದ ಯೋಧ; ಪಾರ್ಥಿವ ಶರೀರ ಹುಟ್ಟೂರಿಗೆ
Tuesday, January 24, 2023
ಮಂಗಳೂರು: ಭೋಪಾಲ್ ನಲ್ಲಿ ಸಶಸ್ತ್ರ ಸೀಮಾ ಬಲ್ ನಲ್ಲಿ ಕರ್ತವ್ಯದಲ್ಲಿದ್ದ ವೇಳೆ ಮಲಗಿದ್ದಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದ ಮಂಗಳೂರಿನ ಶಕ್ತಿನಗರ ಮೂಲದ ಯೋಧ ಮುರಳಿಧರ್ ರೈ (37) ಪಾರ್ಥಿವ ಶರೀರ ಹುಟ್ಟೂರು ಮಂಗಳೂರಿಗೆ ಆಗಮಿಸಿದೆ.
ಭೋಪಾಲ್ ನಲ್ಲಿ ಸಶಸ್ತ್ರ ಸೀಮಾ ಬಲ್ ನಲ್ಲಿ ಕರ್ತವ್ಯದಲ್ಲಿದ್ದ ಯೋಧ ಮುರಳಿಧರ್ ರೈಯವರು ಸೋಮವಾರ ಮುಂಜಾನೆ ಮಲಗಿದ್ದಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಂದು ಅವರ ಪಾರ್ಥಿವ ಶರೀರ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದೆ.
ವಿಮಾನ ನಿಲ್ದಾಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಸೇರಿದಂತೆ ಜಿಲ್ಲಾಡಳಿತದಿಂದ ಸಕಲ ಸರ್ಕಾರಿ ಗೌರವ ಸಲ್ಲಿಸಲಾಗಿದೆ. ಆ ಬಳಿಕ ಎ.ಜೆ ಆಸ್ಪತ್ರೆಯ ಶವಗಾರಕ್ಕೆ ಯೋಧ ಮುರಳೀಧರ ರೈಯವರ ಪಾರ್ಥಿವ ಶರೀರ ರವಾನೆಯಾಗಿದೆ. ನಾಳೆ ಶಕ್ತಿನಗರದ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ.