ದೇವರಾಜ ಅರಸು ಹಿಂದುಳಿದ ಅಭಿವೃದ್ಧಿ ನಿಗಮದಿಂದ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ
Tuesday, January 10, 2023
ಮಂಗಳೂರು:2022-23ನೇ ಸಾಲಿಗೆ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಬಡಕುಟುಂಬದ ಮಹಿಳೆಯರಿಂದ ಹೊಲಿಗೆ ಯಂತ್ರ ವಿತರಣೆ ಯೋಜನೆಗೆ ಸೇವಾಸಿಂದು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹೊಲಿಗೆ ಯಂತ್ರಗಳನ್ನು ವಿತರಿಸುವ ಸ್ವಾವಲಂಬಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗೆ ಸೇರಿದವರಾಗಿರಬೇಕು. (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ ಮಡಿವಾಳ, ಅಲೆಮಾರಿ, ಮತ್ತು ಅರೆಆಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪಸಮುದಾಯಗಳು ಹೊರತುಪಡಿಸಿ) ಕುಟುಂಬದ ವಾರ್ಷಿಕ ಆದಾಯ ಗ್ರಾಮಾಂತರ ಪ್ರದೇಶದವರಿಗೆ 98,000 ರೂ.ಗಳು, ಪಟ್ಟಣ ಪ್ರದೇಶದವರಿಗೆ 1,20,000 ರೂ.ಗಳಾಗಿರಬೇಕು. ಅರ್ಜಿದಾರರು 18ರಿಂದ 55 ವರ್ಷದವರಾಗಿರಬೇಕು. ಆಧಾರ್ ಕಾರ್ಡ್‍ನಲ್ಲಿರುವಂತೆ ಅರ್ಜಿದಾರರ ಹೆಸರು (ಶ್ರೀ/ಶ್ರೀಮತಿ, ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿಯೂ ಹೊಂದಾಣಿಕೆಯಾಗಬೇಕು.
ಅರ್ಹ ಮಹಿಳೆಯರು ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್ ಮಂಗಳೂರು ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಫೆ.20ರೊಳಗೆ ಅರ್ಜಿ ಸಲ್ಲಿಸಬೇಕು. ವಿವರಗಳಿಗೆ ನಿಗಮದ ವೆಬ್‍ಸೈಟ್ https://dbcdc.karnataka.gov.in/ ನೋಡಬಹುದು.
ಹೆಚ್ಚಿನ ಮಾಹಿತಿಗೆ ನಗರದ ಉರ್ವಾಸ್ಟೋರ್‍ನ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ 3ನೇ ಮಹಡಿಯಲ್ಲಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ದೂರವಾಣಿ ಸಂಖ್ಯೆ:0824-2456544 ಅನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.