ಮಂಗಳೂರು: ಡ್ರಗ್ಸ್ ದಂಧೆಯಲ್ಲಿ ಸಿಲುಕಿದ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳಿಗೆ ಗೇಟ್ ಪಾಸ್ ನೀಡಿದ ಕೆಎಂಸಿ ಆಸ್ಪತ್ರೆ
Thursday, January 19, 2023
ಮಂಗಳೂರು: ನಗರದಲ್ಲಿ ವೈದ್ಯರ ಡ್ರಗ್ಸ್ ಜಾಲ ಪ್ರಕರಣದಲ್ಲಿ ಸಿಕ್ಕಿಬಿದ್ದ ಇಬ್ಬರು ವೈದ್ಯರು ಹಾಗೂ ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಕೆಎಂಸಿ ಆಸ್ಪತ್ರೆಯ ಆಡಳಿತ ಮಂಡಳಿ ಅಮಾನತು ಮಾಡಿದೆ.
ಅತ್ತಾವರ ಕೆಎಂಸಿ ಆಸ್ಪತ್ರೆಯ ಮೆಡಿಕಲ್ ಆಫೀಸರ್ ಡಾ.ಸಮೀರ್, ಮೆಡಿಕಲ್ ಸರ್ಜನ್ ಡಾ.ಮಣಿಮಾರನ್ ಮುತ್ತು ಅಮಾನತಾಗಿರುವ ವೈದ್ಯರು. ಅದೇ ರೀತಿ ಡಾ.ಕಿಶೋರಿಲಾಲ್, ಡಾ.ನದೀಯಾ ಸಿರಾಜ್, ಡಾ.ವರ್ಷಿಣಿ ಪತ್ರಿ, ಡಾ.ರಿಯಾ ಚಡ್ಡ, ಡಾ.ಇರಾ ಬಾಸಿನ, ಡಾ.ಕ್ಷಿತಿಜ್ ಗುಪ್ತಾ, ಡಾ.ಹರ್ಷ ಕುಮಾರ್ ವಿ.ಎಸ್. ಅಮಾನತು ಆಗಿರುವ ವೈದ್ಯಕೀಯ ವಿದ್ಯಾರ್ಥಿಗಳು.
ಮಂಗಳೂರಿನಲ್ಲಿ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ಗಾಂಜಾ ಪೆಡ್ಲಿಂಗ್ ಹಾಗೂ ಗಾಂಜಾ ಸೇವನೆ ಪ್ರಕರಣ ಭಾರೀ ಸಂಚಲನ ಸೃಷ್ಟಿಸಿತ್ತು. ಇದೀಗ ಕೆಎಂಸಿ ಆಸ್ಪತ್ರೆ ಆಡಳಿತ ಮಂಡಳಿ ಇಬ್ಬರು ವೈದ್ಯರನ್ನು ವಜಾ ಮಾಡಿ ಗುತ್ತಿಗೆ ರದ್ದುಪಡಿಸಿದೆ. ಅದೇ ರೀತಿ ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡು ಆಸ್ಪತ್ರೆಯಿಂದ ಅಮಾನತು ಮಾಡಿದೆ.
ಮಂಗಳೂರು ಕಮಿಷನರ್ ಕಚೇರಿಗೆ ಆಗಮಿಸಿರುವ ಕೆಎಂಸಿ ಡೀನ್ ಉನ್ನಿಕೃಷ್ಣನ್ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡ ಬಗ್ಗೆ ಪೊಲೀಸ್ ಕಮಿಷನರ್ ಗೆ ಮಾಹಿತಿ ನೀಡಿದ್ದಾರೆ.
Byte: ಮಂಗಳೂರು ಪೊಲೀಸ್ ಕಮಿಷನರ್- ಶಶಿಕುಮಾರ್ ಎನ್.