ಮಂಗಳೂರು: ತುಳು ಸಿನಿಮಾ ಹಾಸ್ಯ ನಟ ಅರವಿಂದ ಬೋಳಾರ್ ಬೈಕ್‌ ಸ್ಕಿಡ್‌ ಆಗಿ ಬಿದ್ದು ಗಾಯ

ಮಂಗಳೂರು: ತುಳು ಸಿನಿಮಾ ಹಾಸ್ಯ ನಟ ಅರವಿಂದ ಬೋಳಾರ್ ಬೈಕ್‌ ಸ್ಕಿಡ್‌ ಆಗಿ ಬಿದ್ದು ಗಾಯ


ಮಂಗಳೂರು: ತುಳು ನಾಟಕ ಹಾಗೂ ತುಳು ಸಿನಿಮಾ ಹಾಸ್ಯ ಕಲಾವಿದ ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್ ಅವರು ಬೈಕ್‌ ಸ್ಕಿಡ್‌ ಆಗಿ ಬಿದ್ದು ಗಾಯಗೊಂಡಿದ್ದಾರೆ. 

ನಗರದ ಪಂಪ್ ವೆಲ್ ಬಳಿ ಅರವಿಂದ ಬೋಳಾರ್ ಚಲಾಯಿಸುತ್ತಿದ್ದ ಬೈಕ್ ಗೆ ಎದುರಾಗಿ ವಾಹನವೊಂದು ಅತೀ ವೇಗವಾಗಿ ಚಲಿಸಿಕೊಂಡು ಬರುತ್ತಿತ್ತು. ಆ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬೈಕ್‌ ಗೆ ಸಡನ್‌ ಆಗಿ ಬ್ರೇಕ್‌ ಹಾಕಿದ್ದಾರೆ. ಈ ವೇಳೆ ಬೈಕ್‌ ಸ್ಕಿಡ್‌ ಆಗಿ ಬಿದ್ದಿದೆ. ಪರಿಣಾಮ ಅವರ ಕೈ- ಕಾಲುಗಳಿಗೆ ಸಣ್ಣಪುಟ್ಟ ಗಾಯವಾಗಿದೆ. ಇದೀಗ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ ಕಾಲಿನ ಶಸ್ತ್ರಚಿಕಿತ್ಸೆ ನಡೆಯಲಿದೆ ಎಂದು ಅರವಿಂದ ಬೋಳಾರ್ ಅವರ ಸಂಬಂಧಿಕರು ತಿಳಿಸಿದ್ದಾರೆ. 

ತಾನು ಸಡನ್ ಬ್ರೇಕ್ ಹಾಕದಿದ್ದಲ್ಲಿ ವೇಗವಾಗಿ ಬರುತ್ತಿದ್ದ ವಾಹನ ತನ್ನ ಮೇಲೆಯೇ ಹರಿದು ಪ್ರಾಣಕ್ಕೆ ಸಮಸ್ಯೆ ಆಗುತ್ತಿತ್ತು ಎಂದು ಅರವಿಂದ್ ಬೋಳಾರ್ ಆತಂಕ ವ್ಯಕ್ತಪಡಿಸಿದ್ದಾರೆ.

Ads on article

Advertise in articles 1

advertising articles 2

Advertise under the article