ಮಂಗಳೂರು: ಅಪಘಾತದಲ್ಲಿ ಬೈಕ್ ಸವಾರನ ಸಾವು ಪ್ರಕರಣ: ಬಸ್ ಚಾಲಕನಿಗೆ 6 ತಿಂಗಳ ಸಾದಾ ಶಿಕ್ಷೆ

ಮಂಗಳೂರು: ಅಪಘಾತದಲ್ಲಿ ಬೈಕ್ ಸವಾರನ ಸಾವು ಪ್ರಕರಣ: ಬಸ್ ಚಾಲಕನಿಗೆ 6 ತಿಂಗಳ ಸಾದಾ ಶಿಕ್ಷೆ



ಮಂಗಳೂರು: ನಗರದ ಕೂಳೂರು ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನ ಸಾವಿಗೆ ಕಾರಣನಾದ ಆರೋಪಿ ಬಸ್ ಚಾಲಕ ಸೀತಾರಾಮ ಎಂಬಾತನಿಗೆ 2ನೇ ಜೆಎಂಎಫ್‌ಸಿ ನ್ಯಾಯಾಲಯ 6 ತಿಂಗಳ ಸಾದಾ ಶಿಕ್ಷೆ ಹಾಗೂ 6 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.

ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಕೂಳೂರು ಸೇತುವೆ ಬಳಿ 2020ರ ಡಿ.4ರಂದು ಅಪಘಾತ ಸಂಭವಿಸಿತ್ತು. ಮಂಗಳೂರಿನಂದ ಸುರತ್ಕಲ್ ಕಡೆಗೆ ಸಂಚರಿಸುತ್ತಿದ್ದ ಬೈಕ್‌ಗೆ ಬಸ್ ಹಿಂದಿನಿಂದ ಢಿಕ್ಕಿ ಹೊಡೆದಿತ್ತು. ಪರಿಣಾಮ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಅಹ್ಮದ್ ಕಬೀರ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದರು. ಈ ಬಗ್ಗೆ ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪೊಲೀಸ್ ನಿರೀಕ್ಷಕ ಮೋಹನ್ ಕೊಟ್ಟಾರಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಪ್ರಕರಣವನ್ನು ಕೈಗೆತ್ತಿಕೊಂಡ 2ನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಅಂಜಲಿ ಶರ್ಮ ವಾದವಿವಾದಗಳನ್ನು ಆಲಿಸಿ, ಸಾಕ್ಷಿಗಳ ಹೇಳಿಕೆಗಳನ್ನು ಆಧರಿಸಿ ಆರೋಪಿಗೆ 6 ತಿಂಗಳ ಸಾದಾ ಶಿಕ್ಷೆ ಹಾಗೂ 6 ಸಾವಿರ ರೂ. ದಂಡ ತೆರಲು ಆದೇಶಿಸಿದಿದ್ದಾರೆ. ದಂಡ ತೆರಲು ತಪ್ಪಿದಲ್ಲಿ ಮತ್ತೆ 100 ದಿನಗಳ ಸಾದಾ ಶಿಕ್ಷೆ ಅನುಭವಿಸುವಂತೆ ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.

ಸರಕಾರದ ಪರವಾಗಿ ಸಹಾಯಕ ಅಭಿಯೋಜಕಿ ಗೀತಾ ರೈ ವಾದಿಸಿದ್ದರು.

Ads on article

Advertise in articles 1

advertising articles 2

Advertise under the article