ಮಂಗಳೂರು: ಎಡಿಜಿಪಿ ಅಲೋಕ್ ಕುಮಾರ್ ರಿಂದ ಸಾರ್ವಜನಿಕರಿಂದ ಕುಂದುಕೊರತೆ ಸ್ವೀಕಾರ
Wednesday, February 8, 2023
ಮಂಗಳೂರು: ಎಡಿಜಿಪಿ ಅಲೋಕ್ ಕುಮಾರ್ ಅವರು ದ.ಕ.ಜಿಲ್ಲೆಯ ಹಾಗೂ ಮಂಗಳೂರು ನಾಗರಿಕರಿಂದ ಎರಡು ದಿನಗಳ ಕಾಲ ಸಾರ್ವಜನಿಕ ಕುಂದುಕೊರತೆಗಳನ್ನು ಸ್ವೀಕಾರ ಮಾಡಲಿದ್ದೇನೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಫೆ.8ರಂದು ಮಧ್ಯಾಹ್ನ ಈ ಬಗ್ಗೆ ಟ್ವೀಟ್ ಮಾಡಿರುವ ಎಡಿಜಿಪಿ ಅಲೋಕ್ ಕುಮಾರ್ ಅವರು 'ಪೊಲೀಸ್ ಇಲಾಖೆಗೆ ಸಂಬಂಧಿಸಿದ ನೈಜ, ವೈಯುಕ್ತಿಕ ಮತ್ತು ಸಾರ್ವಜನಿಕ ಕುಂದುಕೊರತೆಗಳಿದ್ದಲ್ಲಿ ನಾಗರಿಕರು, ತನ್ನನ್ನು ಭೇಟಿ ಮಾಡಬಹುದು. ದಕ್ಷಿಣ ಕನ್ನಡ ಜಿಲ್ಲೆಯ ನಾಗರಿಕರು ಐಜಿಪಿ ಕಚೇರಿಯಲ್ಲಿ ಫೆ.9 ಸಂಜೆ 7 ಗಂಟೆಗೆ ಹಾಗೂ ಮಂಗಳೂರು ನಗರದ ಜನತೆ ಫೆ.10ರಂದು ಬೆಳಗ್ಗೆ 11 ಗಂಟೆಗೆ ತನ್ನನ್ನು ಭೇಟಿ ಮಾಡಬಹುದು. ಸಾಮಾನ್ಯ ನಾಗರಿಕರ ಸೇವೆ ನಮ್ಮ ಧ್ಯೇಯವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಮಂಗಳೂರು ಪೊಲೀಸರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುವ ಬೆನ್ನಲ್ಲೇ ಎಡಿಜಿಪಿ ಅಲೋಕ್ ಕುಮಾರ್ ಅವರ ದ.ಕ.ಜಿಲ್ಲಾ ಭೇಟಿ ಮತ್ತು ಸಾರ್ವಜನಿಕ ಕುಂದುಕೊರತೆಯ ಅಹವಾಲು ಸ್ವೀಕಾರ ಸಾಕಷ್ಟು ಮಹತ್ವವನ್ನು ಪಡೆದಿದೆ.