ನಾಳೆ ಮಂಗಳೂರಿನಲ್ಲಿ ಗೃಹ ಸಚಿವ ಅಮಿತ್ ಶಾ ರೋಡ್ ಶೋ

ನಾಳೆ ಮಂಗಳೂರಿನಲ್ಲಿ ಗೃಹ ಸಚಿವ ಅಮಿತ್ ಶಾ ರೋಡ್ ಶೋ


ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಎರಡೂ ರಾಷ್ಟ್ರೀಯ ಪಕ್ಷಗಳು ರಾಷ್ಟ್ರೀಯ ಮುಖಂಡರನ್ನು ಕರೆಸಿ ಬಿರುಸಿನ ಪ್ರಚಾರ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಎ.29(ನಾಳೆ)ರಂದು ಗೃಹ ಸಚಿವ ಅಮಿತ್ ಶಾ ಮಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ.

ನಾಳೆ ರಾಜ್ಯ ಪ್ರವಾಸದಲ್ಲಿರುವ ಅವರು ಬೆಳಗ್ಗಿನಿಂದ ಸಂಜೆವರೆಗೆ ಮಡಿಕೇರಿ, ಉಡುಪಿಯ ಕಟಪಾಡಿಯಲ್ಲಿ  ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಸಿದ್ದಾಪುರ ಬೈಂದೂರಿನಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಂಗಳೂರಿಗೆ ಆಗಮಿಸಲಿದ್ದಾರೆ. 

ಮಂಗಳೂರಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸುವ ಅವರು ಮೇರಿಹಿಲ್ ಹೆಲಿಕಾಪ್ಟರ್ ನಿಂದ ರಸ್ತೆ ಮಾರ್ಗವಾಗಿ ಪುರಭವನದ ಕಡೆಗೆ ಆಗಮಿಸಲಿದ್ದಾರೆ‌. ಸಂಜೆ 5.40 ರಿಂದ 6.40ರವರೆಗೆ ಪುರಭವನದಿಂದ ನವಭಾರತ ಸರ್ಕಲ್ ವರೆಗೆ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ 6.50 ಕ್ಕೆ ಓಶಿಯನ್ ಪರ್ಲ್ ಹೋಟೆಲ್ ಗೆ ಆಗಮಿಸಲಿದ್ದಾರೆ. ಅಲ್ಲಿ ಸಂಜೆ 7 ರಿಂದ 8 ರವರೆಗೆ ಬಿಜೆಪಿ ಪಕ್ಷದ ಆಂತರಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಯೇ ಭೋಜನ ಸವಿದು ಬಳಿಕ 8.45ರ ವೇಳೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ವಿಮಾನದ ಮೂಲಕ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

Ads on article

Advertise in articles 1

advertising articles 2

Advertise under the article