Mangalore:ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ NIA ದಾಳಿ,ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ 16 ಕಡೆ NIA ರೇಡ್ -

Mangalore:ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ NIA ದಾಳಿ,ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ 16 ಕಡೆ NIA ರೇಡ್ -

ಮಂಗಳೂರು, ಮೇ 31: ದಕ್ಷಿಣ ಕನ್ನಡ ಜಿಲ್ಲೆಯ16
ಕಡೆ ಎನ್‌ಐಎ ಅಧಿಕಾರಿಗಳು ದಾಳಿ
ನಡೆಸಿದ್ದಾರೆ.ಬೆಳ್ತಂಗಡಿ, ಪುತ್ತೂರು, ಬಂಟ್ವಾಳ
ತಾಲೂಕಿನ 16 ಕಡೆ ಇಂದು ನಸುಕಿನಲ್ಲಿ ದಾಳಿ
ಕಾರ್ಯಾಚರಣೆ ನಡೆದಿದ್ದು ಹಲವರನ್ನು ವಶಕ್ಕೆ ಪಡೆದಿದ್ದಾರೆ.

ಸ್ಥಳೀಯ ಪೊಲೀಸರ ನೆರವು ಪಡೆದು ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಭಯೋತ್ಪಾದಕ ಕೃತ್ಯಕ್ಕಾಗಿ ಗಲ್ಫ್ ರಾಷ್ಟ್ರಗಳಿಂದ لب ಹವಾಲಾ ಹಣ ರವಾನೆ ಆಗುತ್ತಿರುವ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ. ದಕ್ಷಿಣ ಭಾರತದಲ್ಲಿ ಬೇರು ಬಿಟ್ಟಿರುವ ಪಿಎಫ್‌ಐ ಹವಾಲಾ ಹಣದ ಜಾಲ ಬೆನ್ನತ್ತಿರುವ ಎನ್‌ಐಎ ತಂಡ ಕಳೆದೊಂದು ವರ್ಷದಲ್ಲಿ ತನಿಖೆ ನಡೆಸುತ್ತಿದೆ. 

ತನಿಖೆಯಲ್ಲಿ ಭಾರತದಲ್ಲಿ ಭಯೋತ್ಪಾದನೆಗೆ ಫಂಡಿಂಗ್ ಮಾಡುತ್ತಿದ್ದ ಹವಾಲಾ ನೆಟ್ವರ್ಕ್ ಪತ್ತೆಯಾಗಿತ್ತು. ಬಿಹಾರದ ಪಾಟ್ನಾದಲ್ಲಿ 2022ರ ಜುಲೈ ತಿಂಗಳಲ್ಲಿ ಪತ್ತೆಯಾಗಿದ್ದ ಫುಲ್ವಾರಿ ಶರೀಫ್ ಪ್ರಕರಣದ ಬಳಿಕ ಈ ಕುರಿತ ತನಿಖೆ ಚುರುಕುಗೊಂಡಿತ್ತು. ಬಿಹಾರದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದು ತನಿಖೆಯಲ್ಲಿ ಕಂಡುಬಂದಿತ್ತು.

ತನಿಖೆಯ ಜಾಡು ಹಿಡಿದು ದಕ್ಷಿಣ ಕನ್ನಡ ಜಿಲ್ಲೆಗೆ ಬಂದಿದ್ದ ಎನ್‌ಐಎ ಅಧಿಕಾರಿಗಳು ಎರಡು ತಿಂಗಳ ಹಿಂದೆ ಬಂಟ್ವಾಳ ಮತ್ತು ಪುತ್ತೂರಿನಲ್ಲಿ ದಾಳಿ ನಡೆಸಿದ್ದರು. ಬಂಟ್ವಾಳ ನಿವಾಸಿ ಮಹಮ್ಮದ್ ಸಿನಾನ್, ಸಜಿಪ ಮೂಡದ ಕಾಸರಗೋಡಿನ ಕುಂಜತ್ತೂರು ನಿವಾಸಿ ಅಬೀದ್ ಕೆ.ಎಂ. ಎಂಬಾತನನ್ನು ಬಂಧಿಸಲಾಗಿತ್ತು.

ಸಫ್ರಾಜ್ ನವಾಜ್, ಇಕ್ಬಾಲ್, ಪುತ್ತೂರಿನ
ಅಬ್ದುಲ್ ರಫೀಕ್ ಮತ್ತು ಕೇರಳದ
ದಾಳಿ ಸಂದರ್ಭದಲ್ಲಿ ಡಿಜಿಟಲ್ ಸಾಕ್ಷ್ಯಗಳು ಮತ್ತು ಬೇನಾಮಿ ಖಾತೆಗಳಲ್ಲಿ ಕೋಟ್ಯಂತರ ರೂ. ವಹಿವಾಟು ನಡೆಸಿದ್ದು ಪತ್ತೆಯಾಗಿತ್ತು. ಇದೇ ನೆಟ್ವರ್ಕ್ ಆಧರಿಸಿ ಅಧಿಕಾರಿಗಳ ತಂಡ ಕಾರ್ಯಾಚರಣೆ ಮುಂದುವರಿಸಿದೆ.

Ads on article

Advertise in articles 1

advertising articles 2

Advertise under the article