ಮಂಗಳೂರು: ವಿದ್ಯಾರ್ಥಿನಿಯನ್ನು 20 ದಿನಗಳ ಕಾಲ ಲಾಡ್ಜ್ ನಲ್ಲಿರಿಸಿ ನಿರಂತರ ಅತ್ಯಾಚಾರ - ವಿವಾಹಿತ ಅರೆಸ್ಟ್
Thursday, June 29, 2023
ಮಂಗಳೂರು: ವಿದ್ಯಾರ್ಥಿನಿಯೋರ್ವಳನ್ನು ಮದುವೆಯಾಗುವೆನೆಂದು ನಂಬಿಸಿ ಹೊಟೇಲ್ ನಲ್ಲಿರಿಸಿ 20 ದಿನಗಳ ಕಾಲ ನಿರಂತರ ಅತ್ಯಾಚಾರಗೈದ ವಿವಾಹಿತನನ್ನು ಮಂಗಳೂರು ಮಹಿಳಾ ಠಾಣೆಯ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಕಡಬ ಮೂಲದ ಅನೀಶ್ ರೆಹಮಾನ್ ಬಂಧಿತ ಕಾಮುಕ.
ಇನ್ ಸ್ಟಾಗ್ರಾಂ ಮೂಲಕ ವಿದ್ಯಾರ್ಥಿನಿಗೆ ಅನೀಶ್ ರೆಹಮಾನ್ ಪರಿಚಯವಾಗಿದ್ದಾನೆ. ಆರೋಪಿ ಸಂತ್ರಸ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ ಮಂಗಳೂರಿನ ಪೂಂಜಾ ಇಂಟರ್ ನ್ಯಾಷನಲ್ ಹೊಟೇಲ್ ಗೆ ಕರೆದೊಯ್ದಿದ್ದಾನೆ. ಅಲ್ಲಿ ರೂಂ ಪಡೆದ ಆತ ಮೇ 28ರಿಂದ ಸುಮಾರು 20 ದಿನಗಳ ಕಾಲ ನಿರಂತರವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ. ಆ ಬಳಿಕ ಆರೋಪಿ ತಾನು ವಿವಾಹಿತ ಎಂಬ ಸತ್ಯ ಬಿಚ್ಚಿಟ್ಟಿದ್ದಾನೆ. ಇದರಿಂದ ಕಂಗಾಲಾದ ವಿದ್ಯಾರ್ಥಿನಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ಇದೀಗ ಮಹಿಳಾ ಠಾಣಾ ಪೊಲೀಸರು ಆರೋಪಿ ಅನೀಶ್ ರೆಹಮಾನ್ ನನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಈ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.