ಬೆಳ್ತಂಗಡಿ: ಕ್ರಿಕೆಟಿಗ ಕೆ.ಎಲ್.ರಾಹುಲ್ ಅವರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ರವಿವಾರ ಭೇಟಿ ನೀಡಿದರು.
ಈ ವೇಳೆ ಶ್ರೀಮಂಜುನಾಥ ಸ್ವಾಮಿ ಹಾಗೂ ಪರಿವಾರ ದೇವರ ದರ್ಶನ ಪಡೆದ ಅವರು ಶ್ರೀದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಉಭಯ ಕುಶಲೋಪರಿ ಮಾತಕತೆ ನಡೆಸಿದರು.