ಮಂಗಳೂರು: ದ.ಕ. ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ನೇಮಕ
Friday, June 16, 2023
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ಎಂ.ಪಿ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.
ನಿಕಟಪೂರ್ವ ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರನ್ನು ವರ್ಗಾವಣೆಗೊಂಡಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಮುಲ್ಲೈ ಮುಹಿಲನ್ ಅವರನ್ನು ನೇಮಕ ಮಾಡಲಾಗಿದೆ. 2013ರ ಸಾಲಿನ ಐಎಎಸ್ ಅಧಿಕಾರಿಯಾಗಿರುವ ಮುಲ್ಲೈ ಮುಹಿಲನ್ ಎಂ.ಪಿ.ಯವರು ಸದ್ಯ ಬೆಂಗಳೂರಿನ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ದ.ಕ. ಜಿಪಂ ಸಿಇಒ ಡಾ.ಕುಮಾರ್ ಅವರನ್ನು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.