ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ.ದ.ಕ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ ಕೂಡ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ heavy rain holiday
Tuesday, July 25, 2023
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದ ಕಾರಣ ಜಿಲ್ಲೆಯಲ್ಲಿ ಪದವಿ ಪೂರ್ವ ಹಂತದವರೆಗೆ ಶಾಲೆ- ಕಾಲೇಜುಗಳಿಗೆ ಬುಧವಾರ (ಜುಲೈ 26) ರಜೆ ಘೋಷಿಸಲಾಗಿದೆ
ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು, ಸರ್ಕಾರಿ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಕಾಲೇಜಿಗೆ ಬರಲು ಅನಾನುಕೂಲವಾಗುವ ಸಂದರ್ಭದಲ್ಲಿ ಆನ್ ಲೈನ್ ಮೂಲಕ ತರಗತಿ ನಡೆಸಬಹುದು ಎಂದು ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.