ನ್ಯಾಯಾಲಯದಿಂದ ಜಾಮೀನು ಪಡೆದ 15 ದಿನದಲ್ಲಿ ಮತ್ತೆ MDMA ಮಾರಾಟ ಮಾಡಿ ಸಿಕ್ಕಿ ಬಿದ್ದ ಆರೋಪಿ- ಜೊತೆಗೆ ಮತ್ತೋರ್ವನು ಸೆರೆ

ನ್ಯಾಯಾಲಯದಿಂದ ಜಾಮೀನು ಪಡೆದ 15 ದಿನದಲ್ಲಿ ಮತ್ತೆ MDMA ಮಾರಾಟ ಮಾಡಿ ಸಿಕ್ಕಿ ಬಿದ್ದ ಆರೋಪಿ- ಜೊತೆಗೆ ಮತ್ತೋರ್ವನು ಸೆರೆಮಂಗಳೂರು: ಮಾದಕ‌ ವಸ್ತು ಎಂಡಿಎಂಎ ಮಾರಾಟ ಮಾಡಿ  ಬಂಧಿತನಾಗಿದ್ದ ಆರೋಪಿ ನ್ಯಾಯಾಲಯದಿಂದ ಜಾಮೀನು ಪಡೆದ 15 ದಿನದಲ್ಲಿ ಮತ್ತೆ ಎಂಡಿಎಂಎ‌ ಮಾರಾಟ ಮಾಡಿ  ಮಂಗಳೂರಿನ ಸಿಸಿಬಿ ಪೊಲೀಸರಿಂದ ಬಂಧಿತನಾಗಿದ್ದಾನೆ.

ಉಪ್ಪಿನಂಗಡಿಯ ಅಬ್ದುಲ್ ಅಜೀಜ್ ಯಾನೆ ಅಜೀಜ್ ಎಂಬಾತನ ವಿರುದ್ಧ ಈ ಹಿಂದೆ ಉಪ್ಪಿನಂಗಡಿ, ವಿಟ್ಲ ಹಾಗೂ ಉರ್ವಾ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದ ಮೂರು ಪ್ರಕರಣ ದಾಖಲಾಗಿತ್ತು. ಇತ್ತೀಚೆಗೆ ಸುಮಾರು 15 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಈತ  ಬಿಡುಗಡೆಗೊಂಡಿದ್ದ. ಬಿಡುಗಡೆ ಬಳಿಕ  ಈತ ಮತ್ತೆ ಅದೇ ಮಾದಕ ವಸ್ತು ಮಾರಾಟ ದಂಧೆ ನಡೆಸಿ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಈತನ ಜೊತೆಗೆ ಸುರತ್ಕಲ್ ಕಾಟಿಪಳ್ಳದ ಅಕ್ಷಿತ್ ಕುಮಾರ್(26) ಎಂಬಾತನನ್ನು ಬಂಧಿಸಲಾಗಿದೆ.

“ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮುಂದುವರಿಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ (Methylene dioxy methamphetamine) MDMA ನ್ನು  ಮಾರಾಟ ಮಾಡುತ್ತಿದ್ದ  ಈ ಇಬ್ಬರನ್ನು ಬಂಧಿಸಲಾಗಿದೆ.

          ಮಂಗಳೂರು ನಗರದ ಕೆ ಎಸ್ ರಾವ್ ರಸ್ತೆ ಪರಿಸರದಲ್ಲಿ ವ್ಯಕ್ತಿಗಳಿಬ್ಬರು  ಅಕ್ರಮವಾಗಿ MDMA ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ  MDMA ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ ಈ ಇಬ್ಬರನ್ನು ಬಂಧಿಸಿದ್ದಾರೆ.

         ಇವರನ್ನು ಬಂಧಿಸಿ ಅವರ ವಶದಿಂದ ಒಟ್ಟು 35 ಗ್ರಾಂ ತೂಕದ ರೂ. 1,75,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು,2  ಮೊಬೈಲ್ ಫೋನ್ ಗಳು, ನಗದು ರೂ. 600/- ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 1,96,000/-ಆಗಬಹುದು  ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.          

 ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರವರಾದ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯವರು ತನಿಖೆ ನಡೆಸಿದ್ದಾರೆ.

Ads on article

Advertise in articles 1

advertising articles 2

Advertise under the article