ಆರು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ- ಅಪರಾಧಿಗೆ 20 ವರ್ಷ ಕಠಿಣ ಸಜೆ

ಆರು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ- ಅಪರಾಧಿಗೆ 20 ವರ್ಷ ಕಠಿಣ ಸಜೆ


ಮಂಗಳೂರು; ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್ ಟಿಎಸ್‌ಸಿ-2 ನ್ಯಾಯಾಲಯದಲ್ಲಿ ಸಾಬೀತಾ ಗಿದೆ.ಆರೋಪಿಗೆ 20 ವರ್ಷಗಳ ಕಠಿಣ ಸಜೆ ವಿಧಿಸಿ ತೀರ್ಪು ನೀಡಲಾಗಿದೆ.

ಹಾವೇರಿ ಜಿಲ್ಲೆಯ ನೆಲೋಗಲ್ ಗ್ರಾಮದ ಬೆನಕರಾಜ್ ಲಮಾಣಿ ಆಲಿಯಾಸ್ ರಾಜ್ (25) ಶಿಕ್ಷೆ 3 ಗೊಳಗಾದ ಅಪರಾಧಿ. ನೊಂದ ಬಾಲಕಿಯ ಅಜ್ಜ ಅಸೌಖ್ಯ ದಿಂದ ಸುರತ್ಕಲ್‌ನ ಮನೆಯಲ್ಲಿದ್ದರು. ಅವರನ್ನು
ನೋಡಿಕೊಳ್ಳಲು ಹೋಮ್‌ ನರ್ಸ್ ಆಗಿದ್ದ ಆರೋಪಿಯನ್ನು ಕರೆಸಿಕೊಳ್ಳಲಾಗಿತ್ತು. 2022ರ ಜನವರಿ ಯಲ್ಲಿ ಬಾಲಕಿ ತಾಯಿ ಔಷಧಕ್ಕೆಂದು ಹೋಗಿದ್ದಾಗ ಆರೋಪಿ ಬಾಲಕಿಯ ಮೇಲೆ ದೌರ್ಜನ್ಯವೆಸಗಿದ್ದ, ಈ ಬಗ್ಗೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‌ಸ್ಪೆಕ್ಟರ್ ಎಸ್.ಎಚ್.ಭಜಂತ್ರಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್‌ಟಿಎಸ್‌ಸಿ-2 ನ್ಯಾಯಾ ಲಯದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು
 ತೀರ್ಪು ನೀಡಿದ್ದಾರೆ.

ಆರೋಪಿಯ ಅಪರಾಧ ಸಾಬೀತಾಗಿರುವ ಹಿನ್ನೆಲೆಯಲ್ಲಿ ಐಪಿಸಿ ಕಲಂ 376 ಮತ್ತು ಪೊಕ್ಸಿ ಕಲಂ 6ರ ಅಡಿಯಲ್ಲಿ 20 ವರ್ಷ ಕಠಿಣ ಸಜೆ ಮತ್ತು 25 ಸಾವಿರ ರೂ, ದಂಡ, ಐಪಿಸಿ ಕಲಂ 323ರಡಿಯಲ್ಲಿ 6 ತಿಂಗಳ ಸಾದಾ ಸಜೆ ಮತ್ತು 1ಸಾವಿರ ರೂ. ದಂಡ ವಿಧಿ ಸಿದ್ದಾರೆ.

ನೊಂದ ಬಾಲಕಿಗೆ 2 ಲಕ್ಷ ರೂ. ಪರಿಹಾರ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶ ನೀಡಿದ್ದಾರೆ. ಅಭಿಯೋಜನಾ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೆಂಕಟರಮಣ ಸ್ವಾಮಿ ಸಿ. ವಾದಿಸಿದ್ದರು.

Ads on article

Advertise in articles 1

advertising articles 2

Advertise under the article