ಮಂಗಳೂರು: 1.57 ಕೋಟಿ ಮೌಲ್ಯದ ತಿಮಿಂಗಿಲ ವಾಂತಿ ಮಾರುತ್ತಿದ್ದ ಮೂವರನ್ನು ಖೆಡ್ಡಾಕ್ಕೆ ಕೆಡವಿದ ಸಿಸಿಬಿ ಪೊಲೀಸರು
Saturday, November 25, 2023
ಮಂಗಳೂರು: ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆಯಲ್ಲಿ 1.57 ಕೋಟಿ ರೂ. ಮೌಲ್ಯದ ತಿಮಿಂಗಿಲ ವಾಂತಿ (ಅಂಬರ್ ಗ್ರೀಸ್)ಯನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಖೆಡ್ಡಾಕ್ಕೆ ಕೆಡವಿದ್ದಾರೆ.
ಚಿಕ್ಕಮಗಳೂರು ಮೂಲದ ಸದ್ಯ ಬಂಟ್ವಾಳ ತಾಲೂಕಿನ ವಿಟ್ಲ ಮಂಗಿಲಪದವು ನಿವಾಸಿಗಳಾದ ಪ್ಯಾರೇಜಾನ್ (37), ಬದ್ರುದ್ದೀನ್ (28), ತಮಿಳುನಾಡಿನ ನಾಗಪಟ್ಟಿನಂ ಜಿಲ್ಲೆಯ ಸನ್ನಿಧಿ ಕೋಯಿಲ್ ಟೆಂಪಲ್ ಸ್ಟ್ರೀಟ್ ನಿವಾಸಿ ರಾಜೇಶ್ ಆರ್.(22) ಬಂಧಿತ ಆರೋಪಿಗಳು.
ಮಂಗಳೂರಿನ ಪಂಪ್ ವೆಲ್ ಬಳಿಯ ಇಂಡಿಯಾನ ಆಸ್ಪತ್ರೆಯ ಬಳಿ ಮೂವರು ಸ್ವಿಫ್ಟ್ ಕಾರಿನಲ್ಲಿ ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್)ಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು. ಈ ಬಗ್ಗೆ ಬಂದ ಖಚಿತ ಮಾಹಿತಿಯನ್ವಯ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಮೂವರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ. ಬಂಧಿತರಿಂದ 1.575 ಕೆಜಿ ತೂಕದ 1,57,50,000 ರೂ. ಮೌಲ್ಯದ ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್) ಹಾಗೂ ಕಾರು, ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 1,62,80,000 ರೂ. ಆಗಬಹುದೆಂದು ಅಂದಾಜಿಸಲಾಗಿದೆ.