ಮಂಗಳೂರು: ಡಿಕೆಶಿ ಸಿಬಿಐ ಕೇಸ್ ವಾಪಾಸ್ - ಪಾರದರ್ಶಕವಾಗಿದ್ದರೆ ಕೇಸ್ ಹಿಂಪಡೆದಿದ್ದೇಕೆ ನಳಿನ್ ವ್ಯಂಗ್ಯ
Friday, November 24, 2023
ಮಂಗಳೂರು: ಸಚಿವ ಸಂಪುಟದಲ್ಲಿ ಡಿಕೆಶಿ ಸಿಬಿಐ ಕೇಸ್ ವಾಪಾಸ್ ಪಡೆದ ವಿಚಾರದಲ್ಲಿ ಕಿಡಿಕಾರಿದ ಸಂಸದ ನಳಿನ್ ಕುಮಾರ್ ಕಟೀಲು, ಇವರು ಪ್ರಾಮಾಣಿಕರು, ಪಾರದರ್ಶಕವಾಗಿದ್ದರೆ ಕೇಸ್ ಹಿಂಪಡೆಯುವ ಅಗತ್ಯವಿಲ್ಲ. ಇವರಿಗೆ ಭಯ ಯಾಕೆ, ಇವರ ಪ್ರಾಮಾಣಿಕತೆ ಪ್ರಶ್ನಾರ್ಥಕ ಚಿಹ್ನೆಯಲ್ಲಿದೆ ಎಂದು ವ್ಯಂಗ್ಯವಾಡಿದರು.
ಸಿಬಿಐ ತನಿಖೆ ಹೊತ್ತಲ್ಲಿ ಸರ್ಕಾರ ಕೇಸ್ ಅನ್ನು ವಾಪಾಸ್ ತೆಗೆಯೋದು ಸರಿಯಲ್ಲ. ಇದು ಸರ್ಕಾರದ ಭ್ರಷ್ಟಾಚಾರವನ್ನು ಸಾರ್ವಜನಿಕವಾಗಿ ತಿಳಿಸುತ್ತದೆ. ಇದನ್ನು ನಾನು ಖಂಡಿಸುತ್ತೇನೆ. ಹಾಗಂತ ಇದೊಂದೇ ಕೇಸ್ ಇಲ್ಲ, ಇಡಿಯಲ್ಲೂ ಸಾಕಷ್ಟು ಕೇಸ್ ಗಳಿವೆ ಎಂದು ನಳಿನ್ ಕುಮಾರ್ ಕಟೀಲು ಹೇಳಿದರು.