ಮಂಗಳೂರು: ಏರ್ ಇಂಡಿಯಾ ವಿಮಾನದಲ್ಲಿ ಹರೇಕಳ ಹಾಜಬ್ಬರಿಗೆ ಅಭಿನಂದನೆ - ವೀಡಿಯೋ ವೈರಲ್

ಮಂಗಳೂರು: ಏರ್ ಇಂಡಿಯಾ ವಿಮಾನದಲ್ಲಿ ಹರೇಕಳ ಹಾಜಬ್ಬರಿಗೆ ಅಭಿನಂದನೆ - ವೀಡಿಯೋ ವೈರಲ್


ಮಂಗಳೂರು: ಹಿದಾಯ ಫೌಂಡೇಶನ್ ‌ ಜುಬೈಲ್ ಘಟಕದ ವತಿಯಿಂದ ದುಬೈನ ದಮ್ಮಾಮ್ ನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿಮಾನದಲ್ಲಿ ಹೊರಟಿದ್ದ ಪದ್ಮಶ್ರೀ ಅಕ್ಷರ ಸಂತ ಹರೇಕಳ ಹಾಜಬ್ಬರನ್ನು ಏರ್ ಇಂಡಿಯಾ ಎಕ್ಸ್ ಪ್ರೆಸ್‌ ವಿಮಾನ ಸಿಬ್ಬಂದಿ ಅಭಿನಂದಿಸಿ ಗೌರವ ತೋರಿದ್ದಾರೆ.

ಹರೇಕಳ ಹಾಜಬ್ಬ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಮಂಗಳೂರಿನಿಂದ ದಮ್ಮಾಮ್ ಗೆ ಪ್ರಯಾಣಿಸುತ್ತಿದ್ದರು. ಅವರನ್ನು ಗುರುತಿಸಿದ ಏರ್ ಇಂಡಿಯಾ ವಿಮಾನದ ಸಿಬ್ಬಂದಿ ಕ್ಯಾಪ್ಟನ್ ಗಮನಕ್ಕೆ ತಂದಿದ್ದಾರೆ. ಆಗ ವಿಮಾನದ ಕ್ಯಾಪ್ಟನ್ ವಿಮಾನದಲ್ಲಿರುವ ಪ್ರಯಾಣಿಕರಿಗೆ ಹಾಜಬ್ಬರನ್ನು ಪರಿಚಯಿಸಿದ್ದಾರೆ. "ಶಿಕ್ಷಣ ರಂಗಕ್ಕೆ ಅಪೂರ್ವವಾದ ಸೇವೆ ಸಲ್ಲಿಸಿರುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರವರು ನಮ್ಮ ವಿಮಾನದಲ್ಲಿ ಪ್ರಯಾಣಿಸುತ್ತಿರುವುದು ನಮಗೆಲ್ಲ ತುಂಬಾ ಸಂತೋಷ ತಂದಿದೆ. ಅವರಿಗೆ ಹೃದಯ ತುಂಬಿದ ಅಭಿನಂದನೆಗಳು ಎಂದು ಹೇಳಿದ್ದಾರೆ.

ಬಳಿಕ ಹಾಜಬ್ಬರೊಂದಿಗೆ ಛಾಯಾಚಿತ್ರವನ್ನು ತೆಗೆಸಿಕೊಂಡರು. ಪ್ರಯಾಣಿಕರು ಚಪ್ಪಾಳೆ ತಟ್ಟುವ ಮೂಲಕ ಅವರಿಗೆ ಗೌರವ ಸೂಚಿಸಿದರು. ಹಾಜಬ್ಬರು ಎಂದಿನಂತೆ ತಮ್ಮ ಮುಗ್ಧತೆಯಿಂದ ಕೈಮುಗಿದು ವಿಧೇಯತೆ ತೋರಿದ್ದಾರೆ. ವಿಮಾನ సిಬ್ಬಂದಿಯೊಂದಿಗೆ ನಿಂತು ಫೋಟೊ ತೆಗೆಸಿಕೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article