ಮಂಗಳೂರು: ಕಾರು ಚಾಲಕನ ಧಾವಾಂತಕ್ಕೆ ಮಹಿಳೆ ಗಂಭೀರ - ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
Saturday, January 13, 2024
ಮಂಗಳೂರು: ಅತಿ ವೇಗದಿಂದ ಬಂದ ಕಾರೊಂದು ರಸ್ತೆ ಬದಿ ನಿಂತಿದ್ದ ಮಹಿಳೆ ಸೇರಿದಂತೆ ಓಮ್ನಿಗೆ ಡಿಕ್ಕಿ ಹೊಡೆದ ಘಟನೆ ದ.ಕ. ಜಿಲ್ಲೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಯ್ಯಪ್ಪನಗರದ ಬಳಿ ನಡೆದಿದೆ. ಘಟನೆಯಲ್ಲಿ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಂಜಲಿ ಶೆಣೈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮಹಿಳೆ.
ಅತೀ ವೇಗದಿಂದ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಗೆ ಇಳಿದು ರಸ್ತೆ ಬದಿ ನಿಂತಿದ್ದ ಮಹಿಳೆ ಹಾಗೂ ಓಮ್ನಿ ಕಾರಿಗೆ ರಭಸದಿಂದ ಡಿಕ್ಕಿಯಾಗಿದೆ. ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಢಿಕ್ಕಿ ಹೊಡೆದು ಕಾರು ಸಹಿತ ಚಾಲಕ ಪರಾರಿಯಾಗಿದ್ದಾನೆ. ಆತ ಬಳಿಕ ಬೆಳ್ತಂಗಡಿ ಠಾಣೆಗೆ ಬಂದು ಶರಣಾಗಿದ್ದಾನೆ. ಅಫಘಾತದ ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.