ಮಂಗಳೂರು:ಕನ್ನಡದ ಖ್ಯಾತ ಸಾಹಿತಿ ಯಕ್ಷಗಾನ ಪ್ರಸಂಗ ಕರ್ತೃ ವಿದ್ವಾಂಸ ಪ್ರೊ.ಅಮೃತ ಸೋಮೇಶ್ವರ ನಿಧನ
Friday, January 5, 2024
ಮಂಗಳೂರು:ಕನ್ನಡದ ಖ್ಯಾತ ಸಾಹಿತಿ ಯಕ್ಷಗಾನ ಪ್ರಸಂಗ ಕರ್ತೃ ವಿದ್ವಾಂಸ ಪ್ರೊ.ಅಮೃತ ಸೋಮೇಶ್ವರ(89) ಇಂದು ಬೆಳಿಗ್ಗೆ ನಿಧನ ಹೊಂದಿದರು. ದಕ್ಷಿಣ ಕನ್ನಡ ಜಿಲ್ಲೆಯ ಕನ್ನಡ, ತುಳು ಸಾಹಿತಿಯಾಗಿ, ಸಂಶೋಧಕರಾಗಿ, ಯಕ್ಷಗಾನ ಪ್ರಸಂಗಕರ್ತರಾಗಿ, ಸಮಾಜಮುಖಿ ಚಿಂತನೆ ಯುಳ್ಳ ಓರ್ವ ಸಹೃದಯಿಯಾಗಿ ಅಮೃತ ಸೋಮೇಶ್ವರ ಕರ್ನಾಟಕದ ಜನರಿಗೆ ಪರಿಚಿತರಾಗಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯ ಕೋಟೆಕಾರು ಸಮೀಪದ ಅಡ್ಯ ಎಂಬಲ್ಲಿ 1953 ಸೆಪ್ಟಂಬರ್ 27 ರಂದು ಜನಿಸಿದ ಸೋಮೇಶ್ವರರು ಪ್ರಾರಂಭಿಕ ಶಿಕ್ಷಣ ಕೋಟೆಕಾರಿನ ಸ್ಟೆಲ್ಲಾ ಮೇರಿ ಕಾನ್ವೆಂಟ್‌ನಲ್ಲಿ , ಪ್ರೌಢ ಶಿಕ್ಷಣವನ್ನ ಆನಂದಾಶ್ರಮದಲ್ಲಿ, ಪದವಿಯನ್ನು ಮಂಗಳೂರಿನ ಸೇಂಟ್ ಅಲೋಷಿಯಸ್ ಕಾಲೇಜಿನಲ್ಲಿ ,ಹಾಗು ಮದರಾಸು ವಿಶ್ವವಿದ್ಯಾಲಯದಿಂದ ಕಲಾ ವಿಭಾಗದಲ್ಲಿ ಪದವಿ ಪಡೆದಿದ್ದಾರೆ.
ತಾವು ಓದಿದ ಅಲೋಶಿಯಸ್ ಕಾಲೇಜಿನಲ್ಲಿ ಅಧ್ಯಾಪಕರಾಗಿ ಕೆಲಸ ಆರಂಭಿಸಿದ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಎಂ.ಎ.ಪದವಿ ಪಡೆದು ನಂತರ ಪುತ್ತೂರಿನ ಸೇಂಟ್ ಫಿಲೋಮಿನ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಹಾಗೂ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ, 1993ರಲ್ಲಿ ನಿವೃತ್ತಿ ಹೊಂದಿದ್ದರು.
ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಕೊಡುಗೆಗಳನ್ನು ನೀಡಿದ ಅಮೃತ ಸೋಮೇಶ್ವರ ಅವರ ಅಗಲಿಕೆ ತುಂಬಲಾರದ ನಷ್ಟವಾಗಿದೆ ಎಂದು ಹಲವು ಸಾಹಿತಿಗಳು, ಲೇಖಕರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.