ಝೀರೋದಿಂದ 256 ಬೆಡ್ ನ ಮಕ್ಕಳ ಆಸ್ಪತ್ರೆ ಕಟ್ಟಿದ ಡಾ.ಧನಂಜಯ ಸರ್ಜಿ : ಹೀಗಿದೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೀವನ ಚರಿತ್ರೆ
Tuesday, May 28, 2024
ಮಂಗಳೂರು: ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿಯವರು ಸಾಮಾನ್ಯ ರೈತ ಕುಟುಂಬದಲ್ಲಿ ಹುಟ್ಟಿ ಝೀರೋದಿಂದ 256 ಬೆಡ್ ನ ಮಕ್ಕಳ ಆಸ್ಪತ್ರೆ ಕಟ್ಟಿದ ಮಹಾನ್ ಸಾಧಕ.
ತಮ್ಮ ಸಣ್ಣ ವಯಸ್ಸಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಣ ಪಡೆದು ಬೆಳೆದ ಡಾ.ಧನಂಜಯ ಸರ್ಜಿಯವರು ಕಾಲೇಜು ದಿನಗಳಲ್ಲಿ ಅತ್ಯುತ್ತಮ ವಿದ್ಯಾರ್ಥಿ. ಇಂದು ಖ್ಯಾತ ಮಕ್ಕಳ ತಜ್ಞ. ಅವರ ಜೀವನ ಸಾಧನೆ ಅಪಾರವಾದದ್ದು. ಕಡಿಮೆ ವೆಚ್ಚದ ವೈದ್ಯಕೀಯ ಸೇವೆಯೊಂದಿಗೆ ಸಮಾಜಮುಖಿ ಕಾರ್ಯದಲ್ಲೂ ತೊಡಗಿಸಿಕೊಂಡಿದ್ದಾರೆ. ಉತ್ಕೃಷ್ಟ ಗುಣಮಟ್ಟದ ಸೇವೆ, ಕೈಗೆಟುಕುವ ದರದಲ್ಲಿ ರೋಗಿಗಳಿಗೆ ಒಂದೇ ಸೂರಿನಡಿ ಸರ್ವ ರೀತಿಯ ಆರೋಗ್ಯ ಸೇವೆ ನೀಡುವ ಮೂಲಕ ಇವರು ಮಲೆನಾಡಿನಾದ್ಯಂತ ಮನೆಮಾತಾಗಿದ್ದಾರೆ.
ಖಾಸಗಿ ಆಸ್ಪತ್ರೆಗಳ ಬಿಲ್ ದರ ಬಡವರನ್ನು ರಕ್ತವನ್ನೇ ಹೀರಿದರೆ, ಇದಕ್ಕೆ ತದ್ವಿರುದ್ಧ ಸರ್ಜಿ ಆಸ್ಪತ್ರೆ. 2014ರಲ್ಲಿ ಝೀರೋ ಬೆಡ್ ನಿಂದ ಆರಂಭಗೊಂಡ ಆಸ್ಪತ್ರೆ ಇಂದು 256 ಬೆಡ್ ಗೆ ತಲುಪಿದ್ದು ಪ್ರಸ್ತುತ ಆರೋಗ್ಯ ಕ್ಷೇತ್ರದ 'ಹೀರೋ' ಆಗಿ ಬೆಳೆದದ್ದು ಅಚ್ಚರಿಯ ಸಂಗತಿ.
ಸರಳ, ಸಜ್ಜನ, ಹಮ್ಮುಬಿಮ್ಮು ಇಲ್ಲದ ಸಹೃದಯಿ ವ್ಯಕ್ತಿತ್ವದ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರೂ ಆದ ಡಾ.ಧನಂಜಯ ಸರ್ಜಿಯವರು ಮೂಲತಃ ದಾವಣಗೆರೆ ಜಿಲ್ಲೆ ಚೆನ್ನಗಿರಿ ತಾಲೂಕಿನ ಗೊತ್ತೇನಹಳ್ಳಿ ಗ್ರಾಮದವರು. ಸರ್ಜಿ ರುದ್ರಪ್ಪ, ತಾಯಿ ರೇಣುಕಾ ತಂದೆ - ತಾಯಂದಿರು. ಇವರ ಎಲ್ಲಾ ಸಾಧನೆಯ ಹಿಂದೆ ಸರ್ಜಿಯವರ ಪತ್ನಿ, ಆಸ್ಪತ್ರೆಯ ನಿರ್ದೇಶಕಿಯೂ ಆದ ನಮಿತಾ ಸರ್ಜಿಯವರ ಶ್ರಮವೂ ಇದೆ.
ದಾವಣಗೆರೆಯ ಜೆಜೆಎಂ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಣದಲ್ಲಿ ಅತ್ಯುತ್ತಮ ವಿದ್ಯಾರ್ಥಿಯಾದ ಡಾ.ಧನಂಜಯ ಸರ್ಜಿಯವರು ಶಿಕ್ಷಣದ ಹಂತದಲ್ಲೇ ಜಿಲ್ಲೆಯ ಆರೋಗ್ಯ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಕನಸು ಕಂಡವರು. ಆ ಕನಸು ಈಗ ಸಾಕಾರಗೊಂಡಿದೆ. 2007ರ ಮಾರ್ಚ್ 18ರಂದು ಶಿವಮೊಗ್ಗದಲ್ಲಿ 'ಸರ್ಜಿ ಚೈಲ್ಡ್ ಕೇರ್ ಸೆಂಟರ್' ಮೂಲಕ ಸೇವೆ ಆರಂಭಗೊಂಡಿತು. ನಂತರ ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳಲ್ಲಿ ತಿಂಗಳ ಸಂಬಳಕ್ಕೆ ಕೆಲಸ ಮಾಡಿದರು. 2014ರಂದು ಜೀರೊ ಹಾಸಿಗೆಯಿಂದ ಶುಭಾರಂಗೊಂಡ ಆಸ್ಪತ್ರೆ ಕೇವಲ 9 ವರ್ಷದಲ್ಲಿ 256 ಬೆಡ್ ವರೆಗೆ ತಲುಪಿದೆ.
ಜಿಲ್ಲಾಡಳಿತದಿಂದ ಪ್ರಶಂಸಾ ಪತ್ರ: ಎರಡು ವರ್ಷಗಳ ಹಿಂದೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮಕ್ಕಳ ಐಸಿಯು ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ಸಂದರ್ಭ ನವಜಾತ 13 ಮಕ್ಕಳನ್ನೂ ಸರ್ಜಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಸರ್ಜಿ ಆಸ್ಪತ್ರೆಯಲ್ಲಿ ಈ ಶಿಶುಗಳಿಗೆ ಸೂಕ್ತ ಚಿಕಿತ್ಸೆ ನೀಡಿ ಆರೈಕೆ ಕಾಪಾಡಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಪ್ರಶಂಸಾ ಪತ್ರ ನೀಡುವ ಮೂಲಕ ಸೇವೆಗೆ ಬೆನ್ನು ತಟ್ಟಿ ಪ್ರೋತ್ಸಾಹಿಸಿತ್ತು.
ಇಂದು ಒಂದೇ ಸೂರಿನಡಿ ಎಲ್ಲಾ ರೀತಿಯ ಚಿಕಿತ್ಸಾ ಸೌಲಭ್ಯ, ಕೈಗೆಟುಕುವ ದರ. ಉತ್ಕೃಷ್ಟ ಹಾಗೂ ನಗುಮೊಗದ ವಿಶ್ವಾಸಾರ್ಹ ಸೇವೆಯೇ ಕಾರಣ. ಈಗ ಅವರ ಸೇವೆಗೆ ರಾಜ್ಯದ ಧಾರವಾಡ, ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಶಿರಸಿ, ಚಿಕ್ಕಮಗಳೂರು, ಹಾಸನ, ಅರಸೀಕರ ಹಾಗೂ ತುಮಕೂರು, ಬೆಂಗಳೂರು ಜಿಲ್ಲೆಗಳಿಂದ ರೋಗಿಗಳು ಚಿಕಿತ್ಸೆ ಪಡೆಯಲು ನಿತ್ಯವೂ ನೂರಾರು ರೋಗಿಗಳು ಬರುತ್ತಿದ್ದಾರೆ. ಒಟ್ಟು 75 ಐಸಿಯು ಬೆಡ್ ಗಳು ಆಪರೇಷನ್ ಥಿಯೇಟರ್ ಗಳ ಸೌಲಭ್ಯ ಇದೆ. ಎರಡೂ ಸರ್ಜಿ ಆಸ್ಪತ್ರೆ ಸೇರಿ ವರ್ಷಕ್ಕೆ ಎರಡು ಲಕ್ಷ ರೋಗಿಗಳು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಪ್ರತಿದಿನಕ್ಕೆ ಸರಾಸರಿ 500ರಿಂದ 750 ರೋಗಿಗಳನ್ನು ತಪಾಸಣೆ ನಡೆಸಿ, ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ವರ್ಷದಲ್ಲಿ 1800ರಿಂದ 2000 ವರೆಗೆ ಹೆರಿಗೆ ಆಗುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಬಂಜೆತನ ನಿವಾರಣೆ ಹೆಜ್ಜೆ: ಬಂಜೆತನ ನಿವಾರಣೆಯಿಂದ ಹಿಡಿದು (preconception) ಭ್ರೂಣ ಹಂತದಲ್ಲಿರುವ ಶಿಶುವಿನಿಂದ ಹಿಡಿದು ಹಿರಿಯ ವಯಸ್ಕರವರೆಗೂ ಸರ್ವ ರೀತಿಯ ಆರೋಗ್ಯ ಸೇವೆ 'ಸರ್ಜಿ'ಯಲ್ಲಿ ಲಭ್ಯ, ಐವಿಎಫ್ ಸೆಂಟರ್ (ಬಂಜೆತನ ನಿವಾರಣಾ ಕೇಂದ್ರ) ಶೀಘ್ರವೇ
ಆರಂಭವಾಗುತ್ತಿದೆ. ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಲ್ಲ ವಿಭಾಗದಲ್ಲಿ ಒಟ್ಟು 30 ಕನ್ನಲೈಂಟ್ ವೈದ್ಯರು ಇದ್ದಾರೆ. ಮತ್ತೊಂದು ವಿಶೇಷವೆಂದರೆ 12 ಭಾಷೆಗಳಲ್ಲಿ ಪ್ರಿಸ್‌ಕ್ರಿಬ್ಬನ್ ಸೌಲಭ್ಯವಿದ್ದು, ರೋಗಿಗಳಿಗೆ ಅನುಕೂಲವಾಗುವ ಭಾಷೆಯಲ್ಲಿ ವೈದ್ಯರು ಬರೆದುಕೊಡುವುದು ವಿಶೇಷ, ಜಿಲ್ಲೆಯ ಆರೋಗ್ಯ ಕ್ಷೇತ್ರದ ಇತಿಹಾಸದಲ್ಲಿ ಇಷ್ಟು ವೇಗವಾಗಿ ಅಭಿವೃದ್ಧಿಗೊಂಡ ಶ್ರೇಯಸ್ಸು ಸರ್ಜಿ ಆಸ್ಪತ್ರೆಗೆ ಸಲ್ಲುತ್ತದೆ.
160 ಮಕ್ಕಳ ದತ್ತು
ಸಾಮಾಜಿಕ ಕಳಕಳಿ ಹೊಂದಿರುವ ಡಾ.ಧನಂಜಯ ಸರ್ಜಿ ಅವರು 2016ರಲ್ಲಿ ಮಕ್ಕಳ ದಿನಾಚರಣೆ ಸಂದರ್ಭ 160 ವಿಶೇಷಚೇತನ ಹಾಗೂ ಅನಾಥ ಮಕ್ಕಳನ್ನು ಆರೋಗ್ಯಕ್ಕೆ ಸಂಬಂಧಿ ಸಿದಂತೆ ದತ್ತು ಪಡೆದಿದ್ದಾರೆ. ಇತ್ತೀಚೆಗೆ 'ಸರ್ಜಿ ಫೌಂಡೇಷನ್' ಎಂಬ ದತ್ತು ಸಂಸ್ಥೆಯನ್ನು ಆರಂಭಿಸಿದ್ದಾರೆ. ಸಂಸ್ಥೆಯ ಮೂಲಕ ಆ ಎಲ್ಲ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ವಿಶೇಷ ಕಾಳಜಿ ವಹಿಸಿರುವುದು ಸರ್ಜಿ ಅವರ ಮಾನವೀಯ ಮೌಲ್ಯಕ್ಕೆ ಸಹಾಯದೊಂದಿಗೆ 2 ಸಾವಿರ ಮಕ್ಕಳಿಗೆ ಉಚಿತವಾಗಿ ಟೈಫಾಯಿಡ್ ವ್ಯಾಕ್ಸಿನೇಷನ್ ನೀಡಿರುವುದು ವಿಶೇಷವಾಗಿದೆ.
ಆಟೊ ಚಾಲಕರಿಗೆ ಹೆಲ್ತ್ ಕಾರ್ಡ್:
ಆಯುಸ್ಮಾನ್ ಭಾರತ್ ಯೋಜನೆ ಅಡಿ ಸಾವಿರಾರು ಮಕ್ಕಳಿಗೆ ಚಿಕಿತ್ಸಾ ಸೌಲಭ್ಯ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಯ 3000 ಅಟೋ ಚಾಲಕರಿಗೆ ಸರ್ಜಿ ಆಸ್ಪತ್ರೆಯಿಂದ ಹೆಲ್ತ್ ಕಾರ್ಡ್‌ಗಳನ್ನು ನೀಡಿ ಅವರ ಆರೋಗ್ಯದ ಜೊತೆ ನಿಂತಿದೆ. ಅಲ್ಲದೇ ಪ್ರತಿ ತಿಂಗಳು ಉಚಿತ ಆರೋಗ್ಯ ಅರಿವು ಶಿಬಿರ ಹಮ್ಮಿಕೊಳ್ಳಲಾಗುತ್ತಿದೆ.
ಕೊರೊನಾ ಕೈ ಮೀರಿದಾಗ ಯುನಿಟಿ ಆಸ್ಪತ್ರೆ ಸಹಯೋಗದಲ್ಲಿ ಸಹಾಯವಾಣಿ ಮೂಲಕವೂ ಸೇವೆ ಸಲ್ಲಿಸಲಾಗಿದೆ.
ಸರ್ಜಿ ಕನಸು:
ಕೇವಲ ಹಣವೇ ಮುಖ್ಯವಾಗಿರದೇ ಕೈಗೆಟುಕುವ ದರದಲ್ಲಿ ಉತ್ಕೃಷ್ಟ ಸೇವೆ ಜನರಿಗೆ ಲಭ್ಯವಾಗುವ ಮೂಲಕ ಶಿವಮೊಗ್ಗ ಒಂದು ದೊಡ್ಡ ಹೆಲ್ತ್ ಕ್ಲಬ್ ಆಗಬೇಕು. ಅಲ್ಲದೇ ಸರಕಾರ ಮಹಾನಗರ ಪಾಲಿಕೆ ಆಸ್ಪತ್ರೆಗಳನ್ನು ತೆರೆಯುವ ಮೂಲಕ ರೋಗಿಗಳಿಗೆ ಸಂಜೀವಿನಿ ಆಗಬೇಕು ಎಂಬುದು ಹಾಗೂ ಪದವೀಧರರಿಗೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಸಿಗುವಂತೆ ಸರ್ಕಾರದ ಮೂಲಕ ಈಡೆರೀಸಬೇಕೆಂಬುದು ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿಯವರ ಕನಸು. ಮತದಾರ ಪ್ರಭು ಆಶೀರ್ವಾದಿಸಿದರೆ ನಂತರ ತನ್ನ ಜೀವನವನ್ನು ಈಗೀನದ್ದಕ್ಕಿಂತಲೂ ಹೆಚ್ಚು ಸಮಾಜದಲ್ಲಿ ಬಡವರಿಗಾಗಿ ಮೀಸಲಿಡಬೇಕೆಂಬುದು ಇವರ ಕನಸಾಗಿದೆ.