ಮಂಗಳೂರು: ನಿಯಂತ್ರಣ ತಪ್ಪಿದ ಕಾರು ಡಿಕ್ಕಿ - ರಸ್ತೆಬದಿ ಬೈಕ್ ನಿಲ್ಲಿಸಿ ಮಾತನಾಡುತ್ತಿದ್ದ ಕೇಬಲ್ ಟೆಕ್ನಿಶಿಯನ್ ಸಾವು

ಮಂಗಳೂರು: ನಿಯಂತ್ರಣ ತಪ್ಪಿದ ಕಾರು ಡಿಕ್ಕಿ - ರಸ್ತೆಬದಿ ಬೈಕ್ ನಿಲ್ಲಿಸಿ ಮಾತನಾಡುತ್ತಿದ್ದ ಕೇಬಲ್ ಟೆಕ್ನಿಶಿಯನ್ ಸಾವು


ಮಂಗಳೂರು: ನಿರ್ಲಕ್ಷ್ಯ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದಿದ್ದ ಕಾರೊಂದು ರಸ್ತೆಬದಿಯಲ್ಲಿ ಬೈಕ್ ನಿಲ್ಲಿಸಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ವ್ಯಕ್ತಿಯೊಬ್ಬರು ಪ್ರಾಣವನ್ನೇ ಕಸಿದುಕೊಂಡ ಘಟನೆ ಪಡೀಲ್ ಫಸ್ಟ್ ನ್ಯೂರೋ ಆಸ್ಪತ್ರೆ ಮುಂಭಾಗದ ಹೆದ್ದಾರಿಯಲ್ಲಿ ಘಟನೆ ನಡೆದಿದೆ. 

ನಮ್ಮ ಕುಡ್ಲ - ವಿಜಾರ್ಡ್ ಕೇಬಲ್ ನೆಟ್ವರ್ಕ್ ಟೆಕ್ನಿಶಿಯನ್, ತೊಕ್ಕೊಟ್ಟು ಬಳಿಯ ಕಲ್ಲಾಪು ನಿವಾಸಿ ಹರೀಶ್ (43) ಮೃತಪಟ್ಟ ದುರ್ದೈವಿ.

ಹರೀಶ್ ಅವರು ಸೋಮವಾರ ಮಧ್ಯಾಹ್ನದ ವೇಳೆ ತಮ್ಮ ಬೈಕನ್ನು ಫಸ್ಟ್ ನ್ಯೂರೋ ಆಸ್ಪತ್ರೆ ಮುಂಭಾಗದ ಫುಟ್ ಪಾತ್ ನಲ್ಲಿ ನಿಲ್ಲಿಸಿ ಮೊಬೈಲಿನಲ್ಲಿ ಮಾತನಾಡುತ್ತಿದ್ದರು. ಈ ವೇಳೆ, ಅಡ್ಯಾರ್ ಕಡೆಯಿಂದ ನಿರ್ಲಕ್ಷ್ಯ ಹಾಗೂ ಅಜಾಗರೂಕತೆಯಿಂದ ಮಹಿಳೆಯೊಬ್ಬರು ಚಲಾಯಿಸಿಕೊಂಡು ಬಂದ ಡಸ್ಟರ್ ಕಾರು ನಿಯಂತ್ರಣ ತಪ್ಪಿ ಬಲಬದಿಯ ಡಿವೈಡರ್ ಗೆ ಡಿಕ್ಕಿಯಾಗಿದೆ. ಅಲ್ಲಿಂದ ಎಡಬದಿಗೆ ಬಂದು ನೇರವಾಗಿ ಹರೀಶ್ ಅವರಿದ್ದ ಬೈಕಿಗೆ ಡಿಕ್ಕಿ ಹೊಡೆದು ಫುಟ್ ಪಾತ್ ಹತ್ತಿದೆ. 
ಈ ವೇಳೆ ರಸ್ತೆಗೆಸೆಯಲ್ಪಟ್ಟು ಹರೀಶ್ ಅವರ ತಲೆಗೆ ತೀವ್ರವಾದ ಗಾಯವಾಗಿತ್ತು‌. ತಕ್ಷಣ ಅವರನ್ನು ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಕಾರು ಚಲಾಯಿಸುತ್ತಿದ್ದ ಮಹಿಳೆ ನಿಯಂತ್ರಣ ತಪ್ಪುತ್ತಲೇ ಬ್ರೇಕ್ ಬದಲು ಎಕ್ಸ್ ಲೆಟರ್ ತುಳಿದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಪುಡಿ ಪುಡಿಯಾಗಿದ್ದು ಚರಂಡಿಗೆ ಬಿದ್ದಿದೆ. ಮೃತರು ಪತ್ನಿ, ಇಬ್ಬರು ಪುತ್ರರು, ತಾಯಿಯನ್ನು ಅಗಲಿದ್ದಾರೆ.

Ads on article

Advertise in articles 1

advertising articles 2

Advertise under the article