ವಿಧಾನ ಪರಿಷತ್ ಚುನಾವಣೆಯಲ್ಲಿ ಮೈತ್ರಿಕೂಟ ಇಬ್ಬರೂ ಅಭ್ಯರ್ಥಿಗಳನ್ನು ಬಹುಮತದಿಂದ ಗೆಲ್ಲಿಸೋಣ‌‌ - ರಾಜೇಶ್ ನಾಯಕ್ ಕರೆ

ವಿಧಾನ ಪರಿಷತ್ ಚುನಾವಣೆಯಲ್ಲಿ ಮೈತ್ರಿಕೂಟ ಇಬ್ಬರೂ ಅಭ್ಯರ್ಥಿಗಳನ್ನು ಬಹುಮತದಿಂದ ಗೆಲ್ಲಿಸೋಣ‌‌ - ರಾಜೇಶ್ ನಾಯಕ್ ಕರೆ


ಬಂಟ್ವಾಳ: ವಿಧಾನಪರಿಷತ್ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟದ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ, ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿಯವರನ್ನು ಬಹುಮತದಿಂದ ಗೆಲ್ಲಿಸಲು ಜೊತೆಯಾಗಿ ಕೆಲಸ ಮಾಡೋಣ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹೇಳಿದರು. 

ಬಂಟ್ವಾಳ ಸ್ಪರ್ಶ ಕಲಾಮಂದಿರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿ, ಕರಾವಳಿ ಅಧಿಕ ಮಂದಿ ನೋಂದಣಿ ಮಾಡಿರುವ ಕ್ಷೇತ್ರ. ಈ ಭಾಗದಿಂದ ಅಭ್ಯರ್ಥಿಗಳಿಗೆ ಹೆಚ್ಚಿನ ಲೀಡ್ ಕೊಡಲು ಶ್ರಮಿಸಬೇಕು ಎಂದರು‌.

ನೈರುತ್ಯ ಪದವೀಧರ ಕ್ಷೇತ್ರದ ಸಹ ಸಂಚಾಲಕ ವಿಕಾಸ್ ಪುತ್ತೂರ್ ಮಾತನಾಡಿ, ಎಲ್ಲ ಮಹಾಶಕ್ತಿ ಕೇಂದ್ರದ ಪ್ರಮುಖರು ಜೊತೆಯಾಗಿ ಕೆಲಸ ಮಾಡಬೇಕಿದೆ. ವಿಧಾನ ಸಭೆ ಹಾಗೂ ಲೋಕಸಭಾ ಚುನಾವಣೆಗಿಂತ ವಿಭಿನ್ನವಾಗಿ ಈ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಕಾರ್ಯಶೀಲರಾಗಬೇಕು. ಪ್ರತಿ ಮತದಾರರನ್ನು ಮತಗಟ್ಟೆಗೆ ಕರೆ ತಂದು ಮೊದಲ ಪ್ರಾಶಸ್ತ್ಯದ ಮತ ಹಾಕಿಸಬೇಕು ಎಂದು ಹೇಳಿದರು. 

ದ.ಕ‌.ಜಿಲ್ಲಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಮಾತನಾಡಿ, ಬೇರೆ ಚುನಾವಣೆಗಿಂತ ವಿಧಾನ ಪರಿಷತ್ ಚುನಾವಣೆಯನ್ನು ಅತ್ಯಂತ ವ್ಯವಸ್ಥಿತವಾಗಿ ಮಾಡಬೇಕು. ಕಾರ್ಯಕರ್ತರು ಮತದಾರರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಬೇಕು. ಈ ಕ್ಷೇತ್ರಗಳು ಭಾವನಾತ್ಮಕವಾಗಿ ಶಕ್ತಿ ನೀಡಿವೆ. ನಮ್ಮ ಸಂಘಟನೆ ಗಟ್ಟಿಯಾಗಿದ್ದು, ಅಭ್ಯರ್ಥಿಗಳನ್ನು ಗೆಲ್ಲಿಸುವ ಅನಿವಾರ್ಯತೆಯಿದೆ. ಈ ನಿಟ್ಟಿನಲ್ಲಿ ಎಲ್ಲರೂ ಕಾರ್ಯೋನ್ಮುಖರಾಗೋಣ ಎಂದರು.
 
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ, ಸಂಘಟನೆಯ ಶಕ್ತಿಯ ಕೇಂದ್ರ ಬಿಂದುವೇ ಕಾರ್ಯಕರ್ತರು, ತಾವೇ ಅಭ್ಯರ್ಥಿ ಎಂದು ತಿಳಿದು ಮತ ಕೇಳಿ, ಪದವೀದರ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮನವಿ ಮಾಡಿದರು.  

ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಮಾತನಾಡಿ, ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಬೇಕಿದೆ. ಪಠ್ಯಪುಸ್ತಕದ ರಾಜಕೀಯ ಸಲ್ಲದು, ದೇಶದ ಮತ್ತು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಜೀವನ ಮೌಲ್ಯದ ಶಿಕ್ಷಣವನ್ನು ಕೊಡಬೇಕಿದೆ. ಈ ಹಿನ್ನೆಲೆಯಲ್ಲಿ ಪ್ರಜ್ಞಾವಂತ ಮತದಾರರು ಸಮರ್ಥ ಅಭ್ಯರ್ಥಿಗಳಿಗೆ ಮತ ಚಲಾಯಿಸಬೇಕು ಹಾಗೂ ಕುಲಗೆಟ್ಟ ಮತಗಳ ಆಗದಂತೆ ನಾವು ಮತದಾರರನ್ನು ಜಾಗೃತಗೊಳಿಸಬೇಕಿದೆ ಎಂದು ಹೇಳಿದರು. 

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ, ಶಾಸಕ ಪ್ರತಾಪ್ ಸಿಂಹ ನಾಯಕ್, ರಾಜ್ಯ ಪ್ರಕೋಷ್ಟಗಳ ಸಂಯೋಜಕ ಎಸ್. ದತ್ತಾತ್ರಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸಂಧ್ಯಾ ಪೈ, ದೇವಪ್ಪ ಪೂಜಾರಿ, ನಿಕಟಪೂರ್ವ ಬಿಜೆಪಿ ಜಿಲ್ಲಾಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಸಂಘಟನಾ ಪ್ರಭಾರಿ ಪೂಜಾ ಪೈ, ಶಿಕ್ಷಕರ ಕ್ಷೇತ್ರದ ಸಹ ಸಂಚಾಲಕಿ ಡಾ.ಮಂಜುಳಾ ಎಸ್. ರಾವ್, ಮಾಜಿ ಸಚಿವ ನಾಗರಾಜ್ ಶೆಟ್ಟಿ, ರಾಜ್ಯ ಪ್ರಕೋಷ್ಟದ ಕಾರ್ಯದರ್ಶಿ ಆರ್.ಸಿ.ನಾರಾಯಣ್, ಜೆಡಿಎಸ್ ನ ಯುವ ನಾಯಕ ಅಕ್ಷಿತ್ ಸುವರ್ಣ, ನಾಯಕರಾದ ಮೋನಪ್ಪ ಭಂಡಾರಿ, ದಿನೇಶ್ ಅಮ್ಟೂರ್ ಮತ್ತಿತರರು ಉಪಸ್ಥಿತರಿದ್ದರು. ಬಂಟವಾಳ ಬಿಜೆಪಿ ಅಧ್ಯಕ್ಷ ಆರ್.ಚನ್ನಪ್ಪ ಕೋಟ್ಯಾನ್ ಸ್ವಾಗತಿಸಿದರು.

Ads on article

Advertise in articles 1

advertising articles 2

Advertise under the article