ಜನವಿರೋಧಿ ಕಾಂಗ್ರೆಸ್ ಸರಕಾರಕ್ಕೆ ನಿಯಂತ್ರಣ ಹಾಕಬೇಕಿದೆ : ಶಾಸಕ ಹರೀಶ್ ಪೂಂಜ

ಜನವಿರೋಧಿ ಕಾಂಗ್ರೆಸ್ ಸರಕಾರಕ್ಕೆ ನಿಯಂತ್ರಣ ಹಾಕಬೇಕಿದೆ : ಶಾಸಕ ಹರೀಶ್ ಪೂಂಜ


ಪುತ್ತೂರು: ಜನ ವಿರೋಧಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ ಅನ್ನು ನಿಯಂತ್ರಣದಲ್ಲಿಡಬೇಕಾದರೆ ವಿಧಾನ ಪರಿಷತ್ ನಲ್ಲಿ ಮೈತ್ರಿಕೂಟದ ಹೆಚ್ಚಿನ ಅಭ್ಯರ್ಥಿಗಳು ಗೆಲುವು ಸಾಧಿಸಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು. 
ಪುತ್ತೂರಿನ ಭಾರತ್ ಮಾತಾ ಸಭಾಂಗಣದಲ್ಲಿ ನಡೆದ ಮತದಾರರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನವಿರೋಧಿ ಮಸೂದೆಗಳನ್ನು ತಡೆಯಬೇಕಾದರೆ ವಿಧಾನ ಪರಿಷತ್ ನಲ್ಲಿ ಮೈತ್ರಿಪಕ್ಷಗಳ ಬಹುಮತ ಅಗತ್ಯ. ಹಾಗಾಗಿ ಸಮರ್ಥರಾದ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಅವರನ್ನು ಪ್ರಚಂಡ ಮತಗಳಿಂದ ಗೆಲ್ಲಿಸಿಕೊಡುವಂತೆ ಮತದಾರರಲ್ಲಿ ಮನವಿ ಮಾಡಿದರು. 

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ, ಊಟ ಶರೀರಕ್ಕೆ ತೃಪ್ತಿ ಕೊಡುತ್ತದೆ. ಪಾಠ ಮೆದುಳಿಗೆ ತೃಪ್ತಿ ಕೊಡುತ್ತದೆ. ನಿಜವಾದ ನಿಸ್ವಾರ್ಥ ಸೇವೆ ಮನಸ್ಸಿಗೆ ತೃಪ್ತಿ ಕೊಡುತ್ತದೆ. ಇಂತಹ ಸೇವಾ ಮನೋಭಾವನೆಯೊಂದಿಗೆ ವೈದ್ಯಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ. ಪದವೀಧರ ಕ್ಷೇತ್ರದ ಸಮಸ್ಯೆಗಳ ಸಂಪೂರ್ಣ ನನಗಿದ್ದು, ಮತ ನೀಡುವ ಮೂಲಕ ಸೇವೆ ಮಾಡಲು ಅವಕಾಶ ಮಾಡಿಕೊಡುವಂತೆ ಅವರು ಮನವಿ ಮಾಡಿದರು.

ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಮಾತನಾಡಿ, ವಿಧಾನ ಪರಿಷತ್ ಸದಸ್ಯನಾಗಿ ಈಗಾಗಲೇ ನಾನು ಸೇವೆ ಸಲ್ಲಿಸಿದ್ದೇನೆ. ಶಿಕ್ಷಕರು, ನೌಕರರ ಸಮಸ್ಯೆಗಳ ಸಂಪೂರ್ಣ ಅರಿವು ನನಗಿದೆ, ನಿಮ್ಮ ಸಮಸ್ಯೆಗಳಿಗೆ ನಾನು ಸ್ಪಂದಿಸಲು ಸದಾ ಬದ್ಧನಾಗಿದ್ದೇನೆ. ತಿದ್ದಿ ತೀಡುತ್ತಾ ಸದೃಢ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುವ ಶಿಕ್ಷಕರು ಹಾಗೂ ಪದವೀಧರ ಮತದಾರರು ಮೈತ್ರಿ ಅಭ್ಯರ್ಥಿಗಳಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕಂಪಲ  ಮೈತ್ರಿ ಕೂಟದ ಅಭ್ಯರ್ಥಿಗಳ ಪರವಾಗಿ ಮತವನ್ನು ಯಾಚಿಸಿದರು. 
ದ.ಕ‌.ಜಿಲ್ಲಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ, ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ರಾಧಾಕೃಷ್ಣ ಆಳ್ವ, ಪುತ್ತೂರು ನಗರ ಮಂಡಲ ಅಧ್ಯಕ್ಷ ಜಗನ್ನಿವಾಸ ರಾವ್, ಪುತ್ತೂರು ಮಾಜಿ ಶಾಸಕ ಸಂಜೀವ್ ಮಠಂದೂರು, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ರಾಜ್ಯ ಪ್ರಕೋಷ್ಟಗಳ ಸಂಯೋಜಕ ಎಸ್. ದತ್ತಾತ್ರಿ, ನೈರುತ್ಯ ಪದವೀಧರ ಕ್ಷೇತ್ರದ ಮಂಗಳೂರು ಜಿಲ್ಲಾ ಸಹ ಸಂಚಾಲಕ ವಿಕಾಸ್ ಪುತ್ತೂರು, ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್ ಮತ್ತಿತರರು ಉಪಸ್ಥಿತರಿದ್ದರು

Ads on article

Advertise in articles 1

advertising articles 2

Advertise under the article