ಉಡುಪಿ: ಜಿಂ.ಎಂ.ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ನಲ್ಲಿ ಧನಂಜಯ ಸರ್ಜಿಯಿಂದ ಮತಯಾಚನೆ
Saturday, May 25, 2024
ಮಂಗಳೂರು: ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿಯವರು ಜಿ.ಎಂ. ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಗೆ ಭೇಟಿ ನೀಡಿ ಮತಯಾಚನೆ ಮಾಡಿದರು.
ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಶನಿವಾರ ಉಡುಪಿಯ ಬ್ರಹ್ಮಾವರ ತಾಲೂಕಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ಜಿ ಎಂ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಗೆ ಭೇಟಿ ನೀಡಿ ಡಾ. ಧನಂಜಯ ಸರ್ಜಿಯವರು ಆಡಳಿತವರ್ಗ, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರಲ್ಲಿ ಪರಿಷತ್ ಚುನಾವಣೆಯಲ್ಲಿ ಬೆಂಬಲಿಸಿ ಅತ್ಯಧಿಕ ಮತಗಳಿಂದ ಗೆಲ್ಲಿಸುವಂತೆ ಮತಯಾಚನೆ ಮಾಡಿದರು.
ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ ಪಾಲ್ ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ , ಸ್ಥಳೀಯ ಬಿಜೆಪಿ ಮುಖಂಡರು, ಕಾಲೇಜಿನ ಆಡಳಿತ ವರ್ಗ , ಉಪನ್ಯಾಸ ವರ್ಗ , ಶಿಕ್ಷಕ ವರ್ಗ ಮತ್ತು ಪದವೀಧರ ಮತದಾರರು ಉಪಸ್ಥಿತರಿದ್ದರು.