ಮಂಗಳೂರು: ವಿಧಾನ ಪರಿಷತ್ ಚುನಾವಣೆ - ದ.ಕ.ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಸಭೆ

ಮಂಗಳೂರು: ವಿಧಾನ ಪರಿಷತ್ ಚುನಾವಣೆ - ದ.ಕ.ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಸಭೆ


ಮಂಗಳೂರು: ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಸಭೆ ಸೋಮವಾರ ನಗರದ ಡೊಂಗರಕೇರಿಯ ಕೆನರಾ ಶಾಲೆಯ ಸುಧೀಂದ್ರ ಸಭಾಂಗಣದಲ್ಲಿ ನಡೆಯಿತು.

ಸಭೆಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಭೋಜೇಗೌಡ ಓರ್ವ ನುರಿತ ರಾಜಕಾರಣಿ. ಅವರ ಮಾತುಗಳು ಕೇಳ್ತಿದ್ರೆ ಅವರು ಬಾಲ್ಯದಲ್ಲಿ ಸ್ವಯಂ ಸೇವಕ ಆಗಿರಬೇಕು ಅನಿಸುತ್ತದೆ‌. ಡಾ.ಧನಂಜಯ ಸರ್ಜಿ ಹೊಟ್ಟೆ ಪಾಡಿಗಾಗಿ ರಾಜಕಾರಣಕ್ಕೆ ಬಂದವರಲ್ಲ. ಅವರು ಮಾಡಿರುವ ಸೇವೆಯ ಕಾರಣಕ್ಕೆ ಜನರು ಅವರನ್ನು ಗುರುತಿಸಿದ್ದಾರೆ ಎಂದರು.

ಸಭೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ, ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಬೋಜೇಗೌಡ, ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿದರು.