ಮಂಗಳೂರು: ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ - ಬ್ರಿಜೇಶ್ ಚೌಟ
Friday, May 24, 2024
ಮಂಗಳೂರು: ವಿಧಾನ ಪರಿಷತ್ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಂಗವಾಗಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು.
ಮಂಗಳೂರಿನ ಕೆನರಾ ಸ್ಕೂಲ್ ಮತ್ತು ಶಾರದಾ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿದ ಅಲ್ಲಿನ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿ, ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.