ತರೀಕೆರೆ: ಮೈತ್ರಿ ಅಭ್ಯರ್ಥಿಗಳ ಪರ ಮತಯಾಚನೆ, ಪೂರ್ವಭಾವಿ ಸಭೆ

ತರೀಕೆರೆ: ಮೈತ್ರಿ ಅಭ್ಯರ್ಥಿಗಳ ಪರ ಮತಯಾಚನೆ, ಪೂರ್ವಭಾವಿ ಸಭೆ

ತರೀಕೆರೆ : ವಿಧಾನ ಪರಿಷತ್ ನೈರುತ್ಯ ಪದವಿಧರ ಮತ್ತು ನೈರುತ್ಯ ಶಿಕ್ಷಕರ ಚುನಾವಣೆಯ ಹಿನ್ನೆಲೆಯಲ್ಲಿ ತರೀಕೆರೆ ಮಂಡಲದ ವತಿಯಿಂದ ಅರಮನೆ ಹೋಟೆಲ್ ಸಭಾಂಗಣದಲ್ಲಿ ಬಿಜೆಪಿ ಕಾರ್ಯಕರ್ತರ ಹಾಗೂ ಚುನಾವಣಾ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು. 
ಸಭೆಯಲ್ಲಿ ತರೀಕೆರೆ ಮಂಡಲದ ಬಿಜೆಪಿ ವಾರ್ಡ್ ಅಧ್ಯಕ್ಷರು , ಬೂತ್ ಅಧ್ಯಕ್ಷರು, ಮಹಾಶಕ್ತಿ ಕೇಂದ್ರದ ಪ್ರಮುಖರಿಗೆ ಚುನಾವಣೆಯ ರೂಪುರೇಷೆಗಳನ್ನು ತಿಳಿಸಿದರು‌. ಈ ವೇಳೆ ತಮ್ಮ ವ್ಯಾಪ್ತಿಯ ಮಹಾಶಕ್ತಿ ಕೇಂದ್ರಗಳಲ್ಲಿ ಪದವೀಧರ ಮತದಾರರನ್ನು ಸಂಧಿಸಿ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್. ಎಲ್. ಭೋಜೇಗೌಡರ ಪರವಾಗಿ ಮತಯಾಚನೆ ಮಾಡಿ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಲಾಯಿತು.
 
ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ದೇವರಾಜ್ ಶೆಟ್ಟಿ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್ ದತ್ತಾತ್ರಿ , ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್. ಅರುಣ್, ಮಾಜಿ ಶಾಸಕರು ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಿ.ಎಸ್. ಸುರೇಶ್, ತರೀಕೆರೆ ಮಂಡಲ ಅಧ್ಯಕ್ಷರಾದ ಪ್ರತಾಪ್ , ಮಾಜಿ ಶಾಸಕರಾದ ಎಸ್. ಎಂ. ನಾಗರಾಜ್, ಜೆಡಿಎಸ್ ತಾಲೂಕು ಅಧ್ಯಕ್ಷರಾದ ನರೇಂದ್ರ, ಬಿಜೆಪಿ ಮುಖಂಡರಾದ ಧ್ರುವಕುಮಾರ್, ಕೆ. ಆನಂದಪ್ಪ, ಎ. ಸಿ. ಚಂದ್ರಪ್ಪ, ಮಂಜುನಾಥ್, ಜೆಡಿಎಸ್ ಮುಖಂಡರಾದ ಶಿವಾನಂದ, ಪದವೀಧರ ಕ್ಷೇತ್ರದ ತಾಲೂಕು ಸಂಚಾಲಕರಾದ ಶಶಿಕುಮಾರ್ , ಶಿಕ್ಷಕರ ಕ್ಷೇತ್ರದ ತಾಲೂಕು  ಸಂಚಾಲಕರಾದ ಸೋಮಶೇಖರ್ , ಬಿಜೆಪಿ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಆನಂದಪ್ಪ, ಬಿಜೆಪಿ ಮಾಜಿ ಜಿಲ್ಲಾ ಕಾರ್ಯದರ್ಶಿಗಳಾದ ಅವಿನಾಶ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಎಚ್. ಮಹೇಂದ್ರ, ಜಿಲ್ಲಾ ಕಾರ್ಯದರ್ಶಿಗಳಾದ ವಸಂತ್ ಕುಮಾರ್, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ವರಿ , ಬಿಜೆಪಿ  ಮುಖಂಡರಾದ ಕೃಷ್ಣ ಮೂರ್ತಿ,ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಚೈತ್ರಶ್ರೀ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article