ಶಿಕಾರಿಪುರ ನ್ಯಾಯಾಲಯ ಆವರಣದಲ್ಲಿ ಮೈತ್ರಿ ಅಭ್ಯರ್ಥಿಗಳ ಪರ ಮತಯಾಚನೆ
Wednesday, May 29, 2024
ಶಿಕಾರಿಪುರ: ಇಲ್ಲಿನ ನ್ಯಾಯಾಲಯ ಸಂಘದ ಆವರಣದಲ್ಲಿ ಬುಧವಾರ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಾಯಿತು.
ವಿಧಾನ ತರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೈತ್ರಿಕೂಟದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಅವರ ಪರವಾಗಿ ಮತಯಾಚಿಸಿದರು. ಇಬ್ಬರೂ ಅಭ್ಯರ್ಥಿಗಳನ್ನು ಅಧಿಕ ಮತಗಳಿಂದ ಗೆಲ್ಲಿಸುವಂತೆ ಎಲ್ಲ ವಕೀಲರುಗಳಲ್ಲಿ ಮನವಿ ಮಾಡಿದರು. ಈ ವೇಳೆ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ನ್ಯಾಯಾಲಯ ಸಂಘದ ಪದಾಧಿಕಾರಿಗಳು, ವಕೀಲರು, ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು.