ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಗೆ ಭೇಟಿ ನೀಡಿ ಡಾ.ಧನಂಜಯ ಸರ್ಜಿ, ಎಸ್ ಎಲ್ ಬೋಜೆಗೌಡರಿಂದ ಮತಯಾಚನೆ

ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಗೆ ಭೇಟಿ ನೀಡಿ ಡಾ.ಧನಂಜಯ ಸರ್ಜಿ, ಎಸ್ ಎಲ್ ಬೋಜೆಗೌಡರಿಂದ ಮತಯಾಚನೆ


ಉಡುಪಿ: ಎನ್ ಡಿ ಎ ಮೈತ್ರಿಕೂಟದ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳಾದ ಡಾ.ಧನಂಜಯ ಸರ್ಜಿ ಮತ್ತು ಎಸ್ ಎಲ್ ಬೋಜೆಗೌಡ ಉಡುಪಿಯ ಪ್ರತಿಷ್ಠಿತ ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ ಮತ ಯಾಚಿಸಿದರು. 

ಈ ವೇಳೆ ಹೆಸರಾಂತ ವೈದ್ಯರು ಮತ್ತು ಡಾ  ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ವೈದಕೀಯ ನಿರ್ದೇಶಕ ಡಾ. ಪಿ. ವಿ ಭಂಡಾರಿ ಅವರನ್ನು ಭೇಟಿ ಮಾಡಿ ವಿಧಾನ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಬೆಂಬಲ ನೀಡುವಂತೆ ಮತ ಯಾಚನೆ ಮಾಡಿದರು. 

ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ , ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ , ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು

Ads on article

Advertise in articles 1

advertising articles 2

Advertise under the article