ಉಡುಪಿ ಜಿಲ್ಲೆಯ ಬ್ರಹ್ಮಾವರದ ಪ್ರತಿಷ್ಠಿತ ವಿದ್ಯಾ ಸಂಸ್ಥೆ ಸೇಂಟ್ ಮೇರೀಸ್ ಸೈರನ್ ಪಿಯು ಕಾಲೇಜಿನಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತಯಾಚನೆ
Saturday, May 25, 2024
ಉಡುಪಿ:ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಶನಿವಾರ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಸೇಂಟ್ ಮೇರೀಸ್ ಸೈರನ್ ಪಿಯು ಕಾಲೇಜಿಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಭೇಟಿ ನೀಡಿದರು.
ವಿಧಾನ ಪರಿಷತ್ ನ ನೈರುತ್ಯ ಪದವಿಧರರ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತ ನೀಡಿ ನನ್ನನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ , ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ , ಕಾಲೇಜಿನ ಪ್ರಾಂಶುಪಾಲರಾದ ಡಾ ಮಂಜುನಾಥ್ ಉಡುಪ , ಡಾ ವಿದ್ಯಾಲತಾ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು, ಕಾಲೇಜಿನ ಆಡಳಿತ ವರ್ಗ , ಉಪನ್ಯಾಸ ವರ್ಗ, ಶಿಕ್ಷಕ ವರ್ಗ ಮತ್ತು ಪದವೀಧರ ಮತದಾರರು ಭಾಗವಹಿಸಿದ್ದರು.