ರೇಣುಕಾಸ್ವಾಮಿ ಕೊಲೆ ಪ್ರಕರಣ ಚಾಲೆಜಿಂಗ್ ಸ್ಟಾರ್ ದರ್ಶನ್ ಸೇರಿ 10 ಜನರ ಅರೆಸ್ಟ್ ಬಂಧನ ಖಚಿತಪಡಿಸಿದ ಪೊಲೀಸ್‌ ಆಯುಕ್ತ ದಯಾನಂದ್‌

ರೇಣುಕಾಸ್ವಾಮಿ ಕೊಲೆ ಪ್ರಕರಣ ಚಾಲೆಜಿಂಗ್ ಸ್ಟಾರ್ ದರ್ಶನ್ ಸೇರಿ 10 ಜನರ ಅರೆಸ್ಟ್ ಬಂಧನ ಖಚಿತಪಡಿಸಿದ ಪೊಲೀಸ್‌ ಆಯುಕ್ತ ದಯಾನಂದ್‌


ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ದಯಾನಂದ್‌ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ನಗರ ಪೊಲೀಸ್ ಆಯುಕ್ತ ದಯಾನಂದ್, ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬವರ ಕೊಲೆ ಕೇಸ್‌ನಲ್ಲಿ ವಶಕ್ಕೆ ಪಡೆಯಲಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ.

ಎರಡು ದಿನಗಳ ಹಿಂದೆ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ಅಪರಿಚಿತ ಮೃತ ದೇಹ ಸಿಕ್ಕಿತ್ತು. ಈ ಹಿನ್ನೆಲೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಇದೇ ಪ್ರಕರಣ ಸಂಬಂಧ ಪೊಲೀಸರು ದರ್ಶನ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಸೋಶಿಯಲ್ ಮೀಡಿಯಾದಲ್ಲಿ ಪವಿತ್ರಗೌಡಗೆ ಅಶ್ಲೀಲವಾಗಿ ಪದೇಪದೇ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದ್ದು, ಇದರಿಂದ ಸಿಟ್ಟಿಗೆದ್ದ ನಟ ದರ್ಶನ್ ಸೇರಿದಂತೆ ಇತರ ಗೆಳೆಯರು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆಸಿಕೊಂಡಿದ್ದರು. ನಟ ದರ್ಶನ್ ಸೇರಿ ಹಲವರು ಹತ್ಯೆ ಮಾಡಿದ್ದಾರೆ. ಬಳಿಕ ಮೃತದೇಹವನ್ನು ಮೂರಿಯಲ್ಲಿ ಎಸೆಯಲಾಗಿದೆ ಎಂದು ಹೇಳಲಾಗಿದೆ. ಜೂನ್ 8 ರಂದು ಕೊಲೆ ಮಾಡಿ ಶವವನ್ನು ಮೂರಿಯಲ್ಲಿ ಎಸೆಯಲಾಗಿತ್ತು. ಜೂನ್ 9 ರಂದು ಶವವನ್ನು ನಾಯಿಗಳು ಎಳೆದಾಡುತ್ತಿದ್ದಾಗ ಶವ ಪತ್ತೆಯಾಗಿದೆ.

ನಟ ದರ್ಶನ್ ಸೇರಿ ಹಲವರು ರೇಣುಕಾಸ್ವಾಮಿ ಅವರ ಮರ್ಮಾಂಗಕ್ಕೆ ಹೊಡೆದು, ಒದ್ದು ಹಲ್ಲೆ ನಡೆಸಿದ್ದರು. ಕೊಲೆ ಮಾಡಿದ ಆರೋಪಿಗಳ ಜತೆ ದರ್ಶನ್ ನಿರಂತರವಾಗಿ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಈಗ ಪೊಲೀಸರು ದರ್ಶನ್ ಅವರನ್ನು ಬಂಧಿಸಿದ್ದಾರೆ. ದರ್ಶನ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿರುವುದಾಗಿ ಬಂಧಿತ ನಾಲ್ವರು ಆರೋಪಿಗಳು ಒಪ್ಪಿಕೊಂಡಿದ್ದಾರೆ ಎನ್ನಲಾಗಿದ್ದು, ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಂಬಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನ ಫಾರ್ಮ್ ಹೌಸ್ ನಲ್ಲಿ ಬಂಧಿಸಲಾಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕಣ ಸಂಬಂಧ ನಟ ದರ್ಶನ್ ಸೇರಿದಂತೆ ಹತ್ತು ಜನರನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ.

Ads on article

Advertise in articles 1

advertising articles 2

Advertise under the article