ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿಯನ್ನು ಗೆಲ್ಲಿಸಲು ಡಾ.ಸಿ.ಎನ್.ಮಂಜುನಾಥ್ ಮನವಿ
Saturday, June 1, 2024
ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಖ್ಯಾತ ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿಯ ಕ್ರ.ಸಂ 2ಕ್ಕೆ ಮತದಾನ ಮಾಡುವಂತೆ ರಾಜ್ಯದ ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್. ಮಂಜುನಾಥ್ ಮನವಿ ಮಾಡಿದರು
ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿರುವ ಡಾ. ಸಿ.ಎನ್.ಮಂಜುನಾಥ್ ಅವರು ಡಾ.ಸರ್ಜಿಯವರಿಗೆ ಮತದಾನ ಮಾಡುವಂತೆ ನೈರುತ್ಯ ಪದವೀಧರ ಕ್ಷೇತ್ರದ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಶಿವಮೊಗ್ಗದ ಖ್ಯಾತ ಮಕ್ಕಳ ತಜ್ಞರಾಗಿದ್ದು, ಹಲವು ಅನಾಥ ಮಕ್ಕಳ ಪಾಲನೆಯನ್ನು ಮಾಡುತ್ತಿದ್ದಾರೆ. ಆದ್ದರಿಂದ ಪದವೀಧರ ಮತದಾರರು ಮೇ 3ರಂದು ಜರಗುವ ಮತದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಡಾ.ಧನಂಜಯ ಸರ್ಜಿಯವರಿಗೆ ಮತದಾನ ಮಾಡುವ ಮೂಲಕ ವಿಧಾನ ಪರಿಷತ್ತಿನ ಘನತೆ ಗೌರವ ಹೆಚ್ಚಾಗುವಂತೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.