ಮುಸ್ಲಿಮರಿಗೆ ವಕ್ಫ್ ಆಸ್ತಿ ಎಲ್ಲಿಂದ ಬಂತು? ಅಕ್ಬರ್, ಔರಂಗಜೇಬ್, ಜಿನ್ನಾ ಕೊಟ್ಟಿದ್ದೇ? ಕಂಡವರ ಜಮೀನಿಗೆಲ್ಲಾ ಮುಲ್ಲಾಗಳು ನೋಟಿಸ್ ಕೊಡ್ತಿದಾರೆ.
Tuesday, October 29, 2024
ಮೈಸೂರು, ಅ.29: ಮುಸ್ಲಿಮರು ವಕ್ಫ್ ಆಸ್ತಿ ಅಂತಾರಲ್ಲ, ಅದು ಅವರಿಗೆ ಎಲ್ಲಿಂದ ಬಂತು? ಅಕ್ಬರ್, ಔರಂಗಜೇಬ್, ಜಿನ್ನಾ ಅಥವಾ ಯಾರಾದರೂ ಸೌದಿಯ ಮುಲ್ಲಾಗಳು ಇವರಿಗೆ ಕೊಟ್ಟ ಆಸ್ತಿಯಾ ಇದು? ಪ್ರತ್ಯೇಕ ಆಸ್ತಿ ಮುಸ್ಲಿಮರಿಗೆ ಎಲ್ಲಿಂದ ಬಂತು? ಯಾರಿಂದ ಅವರಿಗೆ ಬಳುವಳಿ ಬಂದಿದ್ದು? ಎಂದು ಮೈಸೂರಿನ ಮಾಜಿ ಸಂಸದ ಪ್ರತಾಪಸಿಂಹ ಪ್ರಶ್ನೆ ಮಾಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಕ್ಕೆ ಮಾತನಾಡಿದ ಅವರು, ವಿಜಯಪುರದಲ್ಲಿ ರೈತರಿಗೆ ಸೇರಿದ 1200 ಎಕ್ರೆ ಜಮೀನು ತನ್ನದೆಂದು ವಕ್ಫ್ ಬೋರ್ಡ್ ಹೇಳಿದೆ. ಈ ವಕ್ಫ್ ಎಂದರೆ ಏನು? ಇವರಿಗೆ ಜಮೀನು ಬಳುವಳಿ ಆಗಿ ಕೊಟ್ಟಿದ್ದು ಯಾರು? ಇದೇನು ಜಿನ್ನಾ ಕೊಟ್ಟ ಭೂಮಿಯೇ? ಎಂದು ಪ್ರಶ್ನಿಸಿದರು.
ಕೇವಲ ವಿಜಯಪುರ ಮಾತ್ರವಲ್ಲ ಅಲ್ಲ. ಹುಣಸೂರಿನ ಗಣೇಶ ದೇವಸ್ಥಾನ, ಚಿಕ್ಕಮಗಳೂರಿನಲ್ಲಿ ಖಾಸಗಿ ಆಸ್ತಿಯನ್ನು ಕೂಡ ವಕ್ಫ್ ಆಸ್ತಿ ಎಂದು ಹೇಳಿ ಕಬಳಿಸುವ ಪ್ರಯತ್ನ ನಡೆದಿದೆ. ರಾಜ್ಯದಲ್ಲಿನ 1.25 ಲಕ್ಷ ಎಕರೆ ಜಮೀನು ತಮಗೆ ಸೇರಿದ್ದು ಎಂದು ವಕ್ಫ್ ಮಂಡಳಿ ವಾದಿಸುತ್ತಿದೆ. ಚಿಕ್ಕಮಗಳೂರಿನಲ್ಲೂ ಇದೇ ಕಥೆ ಆಗಿದೆ. ಕಂಡವರ ಜಮೀನಿಗೆಲ್ಲಾ ಮುಲ್ಲಾಗಳು ನೋಟಿಸ್ ಕೊಡ್ತಾರೆ, ಇದು ನಮ್ಮದು ಅಂತಿದ್ದಾರೆ. ವಕ್ಫ್ ಬೋರ್ಡ್ ಜಮೀನಿನಲ್ಲಿ ಮುಸ್ಲಿಮರಿಗೆ ಉಳುಮೆ ಮಾಡಲು ಅವಕಾಶ ಕೊಟ್ಟಿದ್ದೀರಾ? ಯಾವ ಮುಸಲ್ಮಾನರಿಗೂ ಕೃಷಿಗೆ ಜಮೀನು ಬಿಟ್ಟುಕೊಟ್ಟಿಲ್ಲ. ಬದಲಾಗಿ ರಿಯಲ್ ಎಸ್ಟೇಟ್ ದಂಧೆ ನಡೆಯುತ್ತಿದೆ. ಕೇಂದ್ರ ಸರ್ಕಾರ ಕೂಡಲೇ ವಕ್ಫ್ ಕಾಯ್ದೆ ಅನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದರು.
ನಮ್ಮ ದೇವಾಲಯ, ಮಠಗಳಲ್ಲಿ ಹಾಕುವಂತೆ ಯಾವತ್ತಾದರೂ ಮಸೀದಿ ಚರ್ಚ್ ಗಳಲ್ಲಿ ಹಿಡಿ ಅನ್ನ ಯಾರಿಗಾದ್ರೂ ಹಾಕಿದ್ದೀರಾ? ಎಂದು ಪ್ರತಾಪಸಿಂಹ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರಿಗೆ ಮುಡಾ ಪ್ರಕರಣ ನಂತರ ಚಾಮುಂಡೇಶ್ವರಿ, ಹಾಸನಾಂಬೆ ಸೇರಿದಂತೆ ಹಿಂದೂ ದೇವತೆಗಳ ಮೇಲೆ ನಂಬಿಕೆ ಬಂದಿದೆ. ಹೀಗಾಗಿ ದೇವಸ್ಥಾನ ಸುತ್ತಲು ಹೋಗಿದ್ದಾರೆ. ಮುಡಾ ಪ್ರಕರಣದಿಂದ ಪಾರು ಮಾಡಲು ಹಿಂದು ದೇವರ ಮೊರೆ ಹೋಗಿದ್ದಾರೆ. ವಿಜಯಪುರ ವಕ್ಫ್ ಆಸ್ತಿ ವಿಚಾರದಲ್ಲಿ ಹಿಂದೂಗಳ ಪರ ತೀರ್ಮಾನ ಕೈಗೊಳ್ಳುತ್ತಾರೆ ಎಂಬ ನಂಬಿಕೆ ಇದೆ ಎಂದು ಪ್ರತಾಪ ಸಿಂಹ ಹೇಳಿದರು.