ಬೆಳಗಾವಿ:20 ದಿನಗಳ ರಜೆ ಮುಗಿಸಿ ಸೇನೆಗೆ ಮರಳುತ್ತೇನೆ ಎಂದು ಹೇಳಿ ಹೋದ ಯೋಧ;ಕೆರೆಗೆ ಹಾರಿ ಆತ್ಮಹತ್ಯೆ
Sunday, November 24, 2024
ಬೆಳಗಾವಿ: ಭಾರತೀಯ ಸೇನೆಯ ಯೋಧರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಪರಸನಟ್ಟಿ ಗ್ರಾಮದಲ್ಲಿ ನಡೆದಿದೆ. ಕಿತ್ತೂರು ತಾಲ್ಲೂಕಿನ ದೇಗಾಂವ ಗ್ರಾಮದ ಯೋಧ ನರೇಶ ಯಲ್ಲಪ್ಪ ಆಗಸರ (28) ಸಾವನ್ನಪ್ಪಿದ್ದಾರೆ.
ನರೇಶ ಅವರು 20 ದಿನಗಳ ಹಿಂದೆ ರಜೆ ಮೇಲೆ ಊರಿಗೆ ಬಂದಿದ್ದರು. ನಿನ್ನೆ ಕೆಲಸಕ್ಕೆ ಹೋಗುವುದಾಗಿ ಹೇಳಿ ಹೊರಟ ಅವರು, ಕೆರೆಗೆ ಹಾರಿದ್ದಾರೆ. ಇದನ್ನು ಸ್ಥಳೀಯರೊಬ್ಬರು ಗಮನಿಸಿದ್ದಾರೆ.
ಘಟನಾ ಸ್ಥಳಕ್ಕೆ ಕಿತ್ತೂರು ಪಿಎಸ್‌ಐ ಪ್ರವೀಣ ಗಂಗೋಳ, ಪ್ರವೀಣ ಕೋಟಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ಸಿಬ್ಬಂದಿಗಳಿಂದ ಮೃತದೇಹದ ಹುಡುಕಾಟ ನಡೆಯುತ್ತಿದೆ. ನಿನ್ನೆ ಸಂಜೆಯಿಂದಲೂ ಕೆರೆಯಲ್ಲಿ ಶೋಧ ಕಾರ್ಯ ಮಾಡಲಾಗುತ್ತಿದೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.