BIG BREAKING: ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಶರಣು: ಡೆತ್ ನೋಟ್ ನಲ್ಲೇನಿದೆ…? ಸಾವಿಗೆ ಕಾರಣವೇನು…?
Sunday, November 3, 2024
ಬೆಂಗಳೂರು: ನಟ, ನಿರ್ದೇಶಕ ಗುರುಪ್ರಸಾದ್ ಅವರು ಬೆಂಗಳೂರಿನ ಅಪಾರ್ಟ್ ಮೆಂಟ್ ವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾದನಾಯಕನಹಳ್ಳಿಯ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಮಠ ಸಿನಿಮಾ ಮೂಲಕ ಖ್ಯಾತಿ ಗಳಿಸಿದ್ದ ಗುರುಪ್ರಸಾದ್ ಅವರು ನಟರೂ ಹೌದು. ಅಪಾರ್ಟ್ ಮೆಂಟ್ ನಲ್ಲಿ ಕಳೆದ ಎಂಟು ತಿಂಗಳಿನಿಂದ ವಾಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
1972ರಲ್ಲಿ ರಾಮನಗರ ಜಿಲ್ಲೆ ಕನಕಪುರದಲ್ಲಿ ಜನಿಸಿದ್ದ ಗುರುಪ್ರಸಾದ್ ಅವರು ಮಠ, ಎದ್ದೇಳು ಮಂಜುನಾಥ, ಡೈರೆಕ್ಟರ್ ಸ್ಪೆಷಲ್, ರಂಗನಾಯಕ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ದೇಶಿಸಿದ್ದರು.
ಅಡೆಮಾ ಸಿನಿಮಾ ಶೂಟಿಂಗ್ ನಡೆಯುತಿತ್ತು. ಆದ್ರೆ, ಯಾಕೆ ಆತ್ಮಹತ್ಯೆ ಮಾಡಿಕೊಂಡರು ಎಂಬುದೇ ಕುತೂಹಲ. ಮಾಹಿತಿ ಪ್ರಕಾರ ಕೌಟುಂಬಿಕ ಕಲಹ ಹಾಗೂ ಆರ್ಥಿಕ ಬಿಕ್ಕಟ್ಟಿನಿಂದ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಅಂದಾಜಿಸಲಾಗಿದೆ. ಡೆತ್ ನೋಟ್ ಬರೆದಿಟ್ಟಿದ್ದು, ಏನೆಲ್ಲಾ ಅಂಶಗಳಿವೆ ಎಂಬುದು ಕುತೂಹಲ ಗರಿಗೆದರುವಂತೆ ಮಾಡಿದೆ.
ಗುರುಪ್ರಸಾದ್ ಅವರು ನೇಣಿಗೆ ಶರಣಾಗಿದ್ದು ಯಾರಿಗೂ ಗೊತ್ತಿರಲಿಲ್ಲ. ಅಪಾರ್ಟ್ ಮೆಂಟ್ ನಲ್ಲಿ ವಾಸನೆ ಬಂದ ಬಳಿಕ ಬಾಗಿಲು ತೆರೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಡೆತ್ ನೋಟ್ ವಶಪಡಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಆತ್ಮಹತ್ಯೆಯೋ ಇಲ್ಲವೋ ಎಂಬುದು ಗೊತ್ತಾಗಲಿದೆ.