ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಬಲಿ
Tuesday, November 5, 2024
ಬೆಂಗಳೂರು: ದೀಪಾವಳಿಯ ಸಂದರ್ಭದಲ್ಲಿ ಸ್ನೇಹಿತರು ಹೇಳಿದರೆಂದು ಪಟಾಕಿಯ ಬಾಕ್ಸ್ ಮೇಲೆ ಕುಳಿತುಕೊಂಡ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಯಲ್ಲಿ ನಡೆದಿದೆ.
ಶಬರೀಶ್ ಮೃತ ಯುವಕ ಎಂದು ತಿಳಿದು ಬಂದಿದೆ. ಮದ್ಯದ ಅಮಲಿನಲ್ಲಿದ್ದ ಶಬರೀಶ್, ಕುಡಿದ ಮತ್ತಿನಲ್ಲಿದ್ದ ತನ್ನ ಆರು ಮಂದಿ ಸ್ನೇಹಿತರ ಸವಾಲನ್ನು ಸ್ವೀಕರಿಸಿ ಬಾಕ್ಸ್ ಮೇಲೆ ಕುಳಿತುಕೊಂಡಿದ್ದು, ಸಿಡಿದಾಗ ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿ ಯಾಗದ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಶುರು ಮಾಡಿದ್ದಾರೆ.
ಇನ್ನು ಘಟನೆ ಸಂಬಂಧ ಕೇಸ್ ದಾಖಲಿಸಿಕೊಂಡಿರುವ ಕೋಣನಕುಂಟೆ ಪೊಲೀಸರು, ಈ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳಾದ ನವೀನ್, ದಿನಕರ್, ಸತ್ಯವೇಲು, ಕಾರ್ತಿಕ್, ಸತೀಶ್, ಸಂತೋಷ್ ಎಂಬುವರನ್ನು ಅರೆಸ್ಟ್ ಮಾಡಿರುವುದಾಗಿಯೂ ಪೊಲೀಸ್ ಮೂಲಗಳು ತಿಳಿಸಿವೆ