ಮಂಗಳೂರು: ಲೇಡಿ ಗೋಶನ್ ಆಸ್ಪತ್ರೆಯ ನಾಲ್ಕನೆಯ ಮಹಡಿಯಿಂದ ಜಿಗಿದ ಬಾಣಂತಿ ; ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು.
Monday, November 11, 2024
ಮಂಗಳೂರು: ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಜಿಗಿದು ಮೃತಪಟ್ಟ ಬಾಣಂತಿ.
ಮೃತಪಟ್ಟ ಮಹಿಳೆಯನ್ನು ಕಾರ್ಕಳದ ರಂಜಿತಾ (28) ಎಂದು ಗುರುತಿಸಲಾಗಿದೆ.
ರಂಜಿತಾ ಹೆರಿಗೆಗಾಗಿ ಕಾರ್ಕಳ ಆಸ್ಪತ್ರೆಗೆ ದಾಖಲಾಗಿದ್ದು ಬಳಿಕ ಹಲವು ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಕಾರಣ ಲೇಡಿಗೋಷನ್‌ಗೆ ಅ.28 ಕ್ಕೆ ದಾಖಲಾಗಿದ್ದರು. ಅ.30 ಕ್ಕೆ ಹೆರಿಗೆಯಾಗಿದ್ದು ಸಿಝೇರಿಯನ್ ಮಾಡಿ ಮಗು ಹೊರಗೆ ತೆಗೆಯಲಾಗಿತ್ತು , ಮಗು ಐಸಿಯುನಲ್ಲಿತ್ತು. ನ.3 ಕ್ಕೆ ಮಗು ಮೃತಪಟ್ಟಿತ್ತು.
ಮಹಿಳೆ ಗುಣಮುಖರಾಗಿದ್ದು ಸೋಮವಾರ ಡಿಸ್ಚಾರ್ಜ್ ಮಾಡುವುದಾಗಿ ವೈದ್ಯರು ಸೂಚಿಸಿದ್ದರು. ಮನೆಯವರು ಕೂಡ ಕರೆದುಕೊಂಡು ಹೋಗಲು ಸಿದ್ದರಾಗಿ ಬಂದಿದ್ದರು. ಆದರೆ ಮಹಿಳೆ ಏಕಾಏಕಿ ನಾಲ್ಕನೇ ಮಹಡಿಯಿಂದ ಹಾರಿದ್ದಾರೆ. ಕೂಡಲೇ ಮಹಿಳೆಯನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆಕೆ ಮೃತಪಟ್ಟಿದ್ದಾರೆಂದು ಆಸ್ಪತ್ರೆಯ ವೈದ್ಯಾಧಿಕಾರಿಯವರು ತಿಳಿಸಿದ್ದಾರೆ. ಈ ಬಗ್ಗೆ ಮಂಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.