ಪಕ್ಷಿಕೆರೆ: ಪತ್ನಿ, ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ವ್ಯಕ್ತಿ
Saturday, November 9, 2024
ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಜಲಜಾಕ್ಷ ರೆಸಿಡೆನ್ಸಿ ಬಹು ಮಹಡಿ ಕಟ್ಟಡದಲ್ಲಿ ವಾಸವಿದ್ದ ವ್ಯಕ್ತಿನೋರ್ವ ಪತ್ನಿ, ಮಗುವನ್ನು ಹತ್ಯೆಗೈದು ತಾನೂ ರೈಲಿನಡಿಗೆ ತಲೆಕೊಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಕಾರ್ತಿಕ್ ಭಟ್ (32) ಎಂದು ಗುರುತಿಸಲಾಗಿದ್ದು, ಪತ್ನಿ ಪ್ರಿಯಾಂಕ (28), ಮಗು ಹೃದಯ್ (4) ಹತ್ಯೆಗೀಡಾದ ದುರ್ದೈವಿಗಳು ಎಂದು ತಿಳಿದುಬಂದಿದೆ. ಶುಕ್ರವಾರ ಈ ಘಟನೆ ನಡೆದಿದೆ ಎನ್ನಲಾಗಿದೆ.
ಆರೋಪಿ ಕಾರ್ತಿಕ್ ಪಕ್ಷಕೆರೆಯಲ್ಲಿರುವ ತನ್ನ ಮನೆಯಲ್ಲಿ ಪತ್ನಿ ಮತ್ತು ಮಗುವನ್ನು ಹತ್ಯೆಗೈದು ಮುಲ್ಕಿಯ ಬೆಳಾಯರುನಲ್ಲಿ ರೈಲಿಗೆ ತಲೆಕೊಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದಾನೆ
ಶುಕ್ರವಾರ ಮಧ್ಯಾಹ್ನ ವ್ಯಕ್ತಿನೋರ್ವ ರೈಲಿಗೆ ತಲೆಕೊಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ತನಿಖೆ ನಡೆಸುವಾಗ ಅತ್ಮಹತ್ಯೆ ಮಾಡಿಕೊಂಡವನು ಪಕ್ಷಕೆರೆಯ ಕಾರ್ತಿಕ್ ಭಟ್ ಎಂದು ತಿಳಿದಿದ್ದು, ಮನೆಗೆ ಬಂದಾಗ ಪತ್ನಿ ಮಗು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸ್ಥಳಕ್ಕೆ ಮಂಗಳೂರು ಎಸಿಪಿ ಶ್ರೀಕಾಂತ್, ಮುಲ್ಕಿ ಪೊಲೀಸ್ ಇನ್ಸ್‌ಪೆಕ್ಟರ್ ವಿದ್ಯಾಧರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆ ನಡೆಸುತ್ತಿದ್ದಾರೆ.