ಮಂಗಳೂರು :ಪಿಲಿಕುಳ ಉದ್ಯಾನವನಕ್ಕೆ ಹೊಸ ಪ್ರಾಣಿಗಳ ಆಗಮನ! ಪ್ರಾಣಿ ವಿನಿಮಯ ಕಾರ್ಯಕ್ರಮದಡಿಯಲ್ಲಿ  ಒಡಿಶಾದ ನಂದನ್ ಕಾನನ್ ಮೃಗಾಲಯದಿಂದ ಪಿಲಿಕುಳ ಮೃಗಾಲಯಕ್ಕೆ ಪ್ರಾಣಿ, ಪಕ್ಷಿಗಳ ವರ್ಗಾವಣೆ.

ಮಂಗಳೂರು :ಪಿಲಿಕುಳ ಉದ್ಯಾನವನಕ್ಕೆ ಹೊಸ ಪ್ರಾಣಿಗಳ ಆಗಮನ! ಪ್ರಾಣಿ ವಿನಿಮಯ ಕಾರ್ಯಕ್ರಮದಡಿಯಲ್ಲಿ ಒಡಿಶಾದ ನಂದನ್ ಕಾನನ್ ಮೃಗಾಲಯದಿಂದ ಪಿಲಿಕುಳ ಮೃಗಾಲಯಕ್ಕೆ ಪ್ರಾಣಿ, ಪಕ್ಷಿಗಳ ವರ್ಗಾವಣೆ.


ಮಂಗಳೂರು: ಪಿಲಿಕುಳ ಮೃಗಾಲಯಕ್ಕೆ ಏಷ್ಯಾಟಿಕ್ ಗಂಡು ಸಿಂಹ ಸೇರಿ ಹಲವು ಹೊಸ ಅತಿಥಿಗಳ ಆಗಮನವಾಗಿದೆ. ಒಡಿಶಾದ ನಂದನ್ ಕಾನನ್ ಮೃಗಾಲಯದಿಂದ 6 ವರ್ಷದ ಏಷ್ಯಾಟಿಕ್ ಗಂಡು ಸಿಂಹ (Asiatic Lion), ತೋಳ (Wolf), ಎರಡು ಘರಿಯಲ್ ಮೊಸಳೆ (Gharial crocodile) ಮತ್ತು ಅಪರೂಪದ ಪಕ್ಷಿಗಳಾದ ಎರಡು ಸಿಲ್ವರ್ ಫೆಸೆಂಟ್ (Silver Pheasant) ಎರಡು ಯೆಲ್ಲೋ ಗೋಲ್ಡನ್ ಫೆಸೆಂಟ್ (Yellow-golden pheasant)ಗಳು ಆಗಮಿಸಿವೆ.

ಪ್ರಾಣಿ ವಿನಿಮಯ ಕಾರ್ಯಕ್ರಮದ ಮೂಲಕ ಕೇಂದ್ರ ಮೃಗಾಲಯದ ಒಪ್ಪಿಗೆ ಪಡೆದು ಮಂಗಳವಾರ ಪಿಲಿಕುಳ ಮೃಗಾಲಯಕ್ಕೆ ಈ ಪ್ರಾಣಿ ಪಕ್ಷಿಗಳು ಆಗಮಿಸಿವೆ.

ಪಿಲಿಕುಳದಿಂದ ನಾಲ್ಕು ಕಾಡು ನಾಯಿ/ಧೋಲ್ (Dhole/Wild Dog), ಅಪರೂಪದ ನಾಲ್ಕು ರೇಟಿಕ್ಯುಲೇಟೆಡ್ ಹೆಬ್ಬಾವು (Reticulated Python), ಎರಡು ಬ್ರಾಹ್ಮಿಣಿ ಗಿಡುಗಗಳು (Bramhiny Kite), ಮೂರು ಏಶಿಯನ್​ ಪಾಮ್ ಸಿವೇಟ್​ (Asian Palm Civet), ಎರಡು ಲಾರ್ಜ್ ಇಗರೇಟ್​ಗಳನ್ನು (Large Egret) ನಂದನ್ ಕಾನನ್ ಮೃಗಾಲಯಕ್ಕೆ ನೀಡಲಾಗುತ್ತಿದೆ. ವಿನಿಮಯದಲ್ಲಿ ಪಿಲಿಕುಳದಿಂದ ರವಾನೆ ಆಗುತ್ತಿರುವ ಪ್ರಾಣಿಗಳು ಪಿಲಿಕುಳ ಮೃಗಾಲಯದಲ್ಲಿ ಜನಿಸಿದವುಗಳಾಗಿವೆ.

ಮೃಗಾಲಯದಲ್ಲಿ ಜೊತೆಯಿಲ್ಲದ ಪ್ರಾಣಿಗಳಿಗೆ ಜೊತೆಗಾಗಿ ಮತ್ತು Pure Blood Line (ಶುದ್ಧ ರಕ್ತ ಸಂಬಂಧ)ಗಳನ್ನು ಉಳಿಸಿಕೊಳ್ಳಲು ಪ್ರಾಣಿ ವಿನಿಮಯ ಕಾರ್ಯಕ್ರಮವನ್ನು ಮಾಡಲಾಗುತ್ತದೆ. ಪಿಲಿಕುಳದಲ್ಲಿ ಮೂರು ಸಿಂಹಗಳಿದ್ದು, ಜೊತೆಗಾರನಾಗಿ ಒಂದು ಗಂಡು ಏಷ್ಯಾಟಿಕ್ ಸಿಂಹವನ್ನು ತರಿಸಲಾಗಿದೆ. ಏಷ್ಯಾಟಿಕ್ ಗಂಡು ಸಿಂಹಗಳ ಸಂಖ್ಯೆ ಭಾರತದ ಮೃಗಾಲಯಗಳಲ್ಲಿ ಅತೀ ಕಡಿಮೆ ಇರುವುದರಿಂದ ದೂರದ ಒಡಿಶಾದ ನಂದನ್ ಕಾನನ್ ಮೃಗಾಲಯದಿಂದ ತರಿಸಲಾಗಿದೆ.