ಲಾರೆನ್ಸ್ ಬಿಷ್ನೋಯ್ ಗ್ಯಾಂಗ್ ಹೆಸರಿನಿಂದ ಸಲ್ಮಾನ್ ಖಾನ್ ಗೆ ಬೆದರಿಕೆ ಬಂದ ಬೆನ್ನಲ್ಲೇ ಸೂಪರ್ ಸ್ಟಾರ್ ಶಾರುಖ್ ಖಾನ್ಗೂ ಕೊಲೆ ಬೆದರಿಕೆ: ಎಫ್ಐಆರ್ ದಾಖಲು
Thursday, November 7, 2024
ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಬೆನ್ನಲ್ಲೇ ವಿಶ್ವದಾದ್ಯಂತ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿರುವ ಕಿಂಗ್ ಖಾನ್ ಶಾರುಖ್ ಅವರಿಗೂ ಕೊಲೆ ಬೆದರಿಕೆ ಬಂದಿದೆ.
ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್‌ಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಅಪರಿಚಿತ ವ್ಯಕ್ತಿಯ ವಿರುದ್ಧ ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 506(4) ಮತ್ತು 351(3)(4) ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಹೆಚ್ಚಿನ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಸಲ್ಮಾನ್ ಖಾನ್ ಅವರಿಗೆ ಇತ್ತೀಚೆಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಕೊಲೆ ಬೆದರಿಕೆ ಬಂದಿತ್ತು. ಕ್ಷಮೆಯಾಚಿಸಬೇಕು ಅಥವಾ 5 ಕೋಟಿ ರೂಪಾಯಿ ನೀಡಬೇಕೆಂದು ತಮ್ಮ ಬೇಡಿಕೆ ಇಟ್ಟಿದ್ದರು. ಬೆದರಿಕೆ ಹಿನ್ನೆಲೆಯಲ್ಲಿ ಭಾಯ್ಜಾನ್ನ ಭದ್ರತೆಯನ್ನು ಮುಂಬೈ ಪೊಲೀಸರು ಹೆಚ್ಚಿಸಿದ್ದಾರೆ
ಇತ್ತೀಚೆಗೆ ಬಾಲಿವುಡ್ ಸೆಲೆಬ್ರಿಟಿಗಳ ವಿರುದ್ಧ ಬಂದಿರುವ ಕೊಲೆ ಬೆದರಿಕೆಗಳು ಅವರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಅಭಿಮಾನಿಗಳಲ್ಲಿ ಕಳವಳ ಹೆಚ್ಚಿಸಿವೆ. ಪೊಲೀಸರು ಈ ಕೊಲೆ ಬೆದರಿಕೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಕಿಡಿಗೇಡಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಸಲ್ಮಾನ್ ಖಾನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಹುಬ್ಬಳ್ಳಿಯಲ್ಲಿದ್ದಾನೆ ಎಂಬ ಮಾಹಿತಿ ಮುಂಬೈ ಪೊಲೀಸರಿಗೆ ಸಿಕ್ಕಿತ್ತು. ಹಾಗಾಗಿ ಇತ್ತೀಚೆಗೆ ಮುಂಬೈ ಪೊಲೀಸರ ತಂಡ ಹುಬ್ಬಳಿಗೆ ಆಗಮಿಸಿ ತನಿಖೆ ನಡೆಸಿದೆ ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ಸಿಕ್ಕಿದೆ.