ಬೆಂಗಳೂರು :ಇನ್ಮುಂದೆ ಟ್ರಾಫಿಕ್​​ ನಿಯಮ ಉಲ್ಲಂಘಿಸಿದರೆ FIR ದಾಖಲಾಗುತ್ತದೆ.

ಬೆಂಗಳೂರು :ಇನ್ಮುಂದೆ ಟ್ರಾಫಿಕ್​​ ನಿಯಮ ಉಲ್ಲಂಘಿಸಿದರೆ FIR ದಾಖಲಾಗುತ್ತದೆ.

ಬೆಂಗಳೂರು ನಗರದಲ್ಲಿ ಟ್ರಾಫಿಕ್ ನಿಮಯಗಳ ಉಲ್ಲಂಘನೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಟ್ರಾಫಿಕ್ ನಿಯಮಗಳನ್ನು ಉಲ್ಲಂಘನೆ ಮಾಡುವವರ ವಿರುದ್ಧ ಟ್ರಾಫಿಕ್ ಪೊಲೀಸರು ಹದ್ದಿನ ಕಣ್ಣು ಇಡಲಿದ್ದಾರೆ.

ಟ್ರಾಫಿಕ್​​ ರೂಲ್ಸ್​​ ಬ್ರೇಕ್​​ ಮಾಡೋರ ವಿರುದ್ಧ ಬೆಂಗಳೂರಲ್ಲಿ ಪೊಲೀಸರು ಈಗಾಗಲೇ ಎಫ್​ಐಆರ್​​ ದಾಖಲಿಸಲು ಆರಂಭಿಸಿದ್ದಾರೆ.ಸಿಗ್ನಲ್ ಜಂಪ್ ಮಾಡುವುದು, ಏಕಮಾರ್ಗ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಲಾಯಿಸುವುದು ಹಾಗೂ ರಸ್ತೆಗಳ ಮೇಲೆ ವಾಹನ ನಿಲ್ಲಿಸಿ ಸಂಚಾರಕ್ಕೆ ಅಡಚಣೆ ಉಂಟುಮಾಡುವಂತಹ ಪ್ರಕರಣಗಲಿಗೆ ಸಂಬಂಧಿಸಿ ಆಯಾ ಪ್ರದೇಶಗಳ ವ್ಯಾಪ್ತಿಯ ಸಂಚಾರ ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ.

ಈ ಬಗ್ಗೆ ಸ್ವತಃ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಅನೂಪ್ ಶೆಟ್ಟಿ ಅವರೇ ಮಾಹಿತಿ ನೀಡಿರೋದಾಗಿ ದಿ ನ್ಯೂ ಇಂಡಿಯನ್​​ ಎಕ್ಸ್ಪ್ರೆಸ್​​ ವರದಿ ಮಾಡಿದೆ.

ಪೊಲೀಸ್‌ ಅಂಕಿ ಅಂಶಗಳ ಪ್ರಕಾರ 2025ರ ಜನವರಿಯಿಂದ ನವೆಂಬರ್‌ವರೆಗೆ ಬೆಂಗಳೂರಿನಲ್ಲಿ 6,62,447 ಸಿಗ್ನಲ್ ಜಂಪಿಂಗ್ ಪ್ರಕರಣಗಳು ಹಾಗೂ 3,02,962 ನೋ-ಎಂಟ್ರಿ ಉಲ್ಲಂಘನೆಗಳು ದಾಖಲಾಗಿವೆ. ಏಕಮುಖ ರಸ್ತೆಯಲ್ಲಿನ ಸಂಚಾರ ಟ್ರಾಫಿಕ್​​ ಸಮಸ್ಯೆಗೆ ಕಾರಣವಾಗುವ ಜೊತೆಗೆ ಅಪಘಾತಗಳಿಗೂ ಎಡೆಮಾಡಿಕೊಡುವ ಸಾಧ್ಯತೆ ಇರುತ್ತದೆ.

ಹೀಗಾಗಿ ಇಂತಹ ಸಂದರ್ಭಗಳಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್)ಯ ಸೆಕ್ಷನ್‌ 285 (ಸಾರ್ವಜನಿಕ ಮಾರ್ಗದಲ್ಲಿ ಅಪಾಯ ಅಥವಾ ಅಡ್ಡಿ ಉಂಟುಮಾಡುವುದು) ಅಡಿಯಲ್ಲಿ ನಿಯಮ ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಾಗಲಿದೆ.

Ads on article

Advertise in articles 1

advertising articles 2

Advertise under the article