ಧಾರವಾಡ :ಪ್ರತಿಷ್ಠಿತ ಡಿಮ್ಹಾನ್ಸ್ ಸಂಸ್ಥೆಯಲ್ಲಿ ಮನೋವೈದ್ಯಶಾಸ್ತ್ರದ ಪಿಜಿ ವ್ಯಾಸಂಗ ಮಾಡುತ್ತಿದ್ದ ಯುವತಿ ಆತ್ಮ*ಹತ್ಯೆ nimhance psychytrist pygycian suicide

ಧಾರವಾಡ :ಪ್ರತಿಷ್ಠಿತ ಡಿಮ್ಹಾನ್ಸ್ ಸಂಸ್ಥೆಯಲ್ಲಿ ಮನೋವೈದ್ಯಶಾಸ್ತ್ರದ ಪಿಜಿ ವ್ಯಾಸಂಗ ಮಾಡುತ್ತಿದ್ದ ಯುವತಿ ಆತ್ಮ*ಹತ್ಯೆ nimhance psychytrist pygycian suicide

ಧಾರವಾಡ: ಪ್ರತಿಷ್ಠಿತ ಡಿಮ್ಹಾನ್ಸ್ ಸಂಸ್ಥೆಯಲ್ಲಿ ಮನೋವೈದ್ಯಶಾಸ್ತ್ರದ ಪಿಜಿ ವ್ಯಾಸಂಗ ಮಾಡುತ್ತಿದ್ದ ಡಾ. ಪ್ರಜ್ಞಾ ಪಾಲೇಗರ್ ಎಂಬ ಯುವತಿ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಶಿವಮೊಗ್ಗ ಮೂಲದ ಡಾ. ಪ್ರಜ್ಞಾ ಪಾಲೇಗರ್ (24) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರು ಡಿಮ್ಹಾನ್ಸ್ ಸಂಸ್ಥೆಯಲ್ಲಿ ಮೊದಲ ವರ್ಷದ ಸೈಕಿಯಾಟ್ರಿಕ್ (ಮನೋವೈದ್ಯಶಾಸ್ತ್ರ) ವಿಭಾಗದಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದರು. ಕೇವಲ ಎರಡು ವಾರಗಳ ಹಿಂದಷ್ಟೇ ಇವರು ಈ ಸಂಸ್ಥೆಗೆ ಸೇರ್ಪಡೆಯಾಗಿದ್ದರು.

ಪ್ರಜ್ಞಾ ಅವರ ಪೋಷಕರು ಮಗಳನ್ನು ನೋಡಲು ಧಾರವಾಡಕ್ಕೆ ಬಂದಿದ್ದರು. ನಿನ್ನೆಯಷ್ಟೇ ಅವರು ಧಾರವಾಡಕ್ಕೆ ಬಂದು ಮಗಳ ಜೊತೆ ಸಮಯ ಕಳೆದು, ರಾತ್ರಿ ಶಿವಮೊಗ್ಗಕ್ಕೆ ಮರಳಿದ್ದರು.ರಾತ್ರಿ ರೂಮಿನಲ್ಲಿ ಒಬ್ಬಳೇ ಇದ್ದ ಪ್ರಜ್ಞಾ, ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಇಂದು ಬೆಳಿಗ್ಗೆ ಪ್ರಿಯಾ ಅವರು ರೂಮಿಗೆ ಮರಳಿದಾಗ ಪ್ರಜ್ಞಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಕ್ಷಣ ಅವರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪೋಷಕರು ಭೇಟಿಯಾಗಿ ತೆರಳಿದ ಕೆಲವೇ ಗಂಟೆಗಳಲ್ಲಿ ಈ ನಿರ್ಧಾರ ಕೈಗೊಂಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article