ಬೆಂಗಳೂರು :ಕಾಲೇಜು ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸ್ ಕಾನ್ಸ್​​​​ಟೇಬಲ್ ಅರೆಸ್ಟ್....!!!

ಬೆಂಗಳೂರು :ಕಾಲೇಜು ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸ್ ಕಾನ್ಸ್​​​​ಟೇಬಲ್ ಅರೆಸ್ಟ್....!!!

ಬೆಂಗಳೂರು: ಪೊಲೀಸ್ ಕಾನ್ಸ್​​​​ಟೇಬಲ್​​  ಕಾಲೇಜು ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಬೆಳಕಿಗೆ ಬಂದಿದೆ.

ಇತ್ತೀಚೆಗೆ ಫ್ರೀಡಂ ಪಾರ್ಕ್​ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಯಮುನಾ ನಾಯಕ್, ತನಗೆ ಲೈಂಗಿಕ ಕಿರುಕುಳ ನೀಡಿದ್ದ ಎಂದು ಪಿಯುಸಿ ವಿದ್ಯಾರ್ಥಿಯೋರ್ವ ಆರೋಪಿಸಿದ್ದಾನೆ.

ಈ ಸಂಬಂಧ ನೊಂದ ವಿದ್ಯಾರ್ಥಿ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರ ಮೇರೆಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ಈ ದೂರಿನ ಮೇರೆಗೆ ಉಪ್ಪಾರಪೇಟೆ ಪೊಲೀಸರು, ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಅರೋಪಿ ಪೇದೆ ಯಮುನಾ ನಾಯಕ್​​ ನನ್ನು ಬಂಧಿಸಿದ್ದಾರೆ.

ಸದ್ಯ ಯಮುನಾ ನಾಯಕ್‌ನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Ads on article

Advertise in articles 1

advertising articles 2

Advertise under the article